ಮಿನಿ ಉದ್ಯೋಗ ಮೇಳ

ಉಡುಪಿ, ಅಕ್ಟೋಬರ್ 7 (ಕವಾ): ಆಲ್ಸೆಕ್ ಟೆಕ್ನಾಲಜಿ ಪ್ರೈ.ಲಿ, ರಾಂಡ್ ಸ್ಟಾಂಡ್ ಇಂಡಿಯಾ ಪ್ರೈ.ಲಿ, ಸಂಗೀತಾ ಮೊಬೈಲ್ಸ್, ಪ್ಲಿಫ್‌ಕಾರ್ಟ್ ಹಾಗೂ ಶಾಂತ ಎಲೆಕ್ಟಿçÃಕಲ್ಸ್ ಪ್ರೈ.ಲಿ ಕಂಪನಿಗಳ ವತಿಯಿಂದ ಅಕ್ಟೋಬರ್ 11 ರಂದು ಬೆಳಗ್ಗೆ 10.30
ಕ್ಕೆ ಉಡುಪಿಯ ಅನುರಾಗ ಕಾಂಪ್ಲೆಕ್ಸ್ನ ಶಾಂತ ಎಲೆಕ್ಟ್ರಿಕಲ್ಸ್ ಪ್ರೈ.ಲಿ ಇಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿAಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿ
ಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ,
ಉಡುಪಿ, ಮೊ.ಸಂಖ್ಯೆ:8105618291 9945856670, 8197440155 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ
ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 

Leave a Reply