ಚೇರ್ಕಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 70 ಎಕರೆ ಹಡಿಲು ಕೃಷಿ ಭೂಮಿಯಲ್ಲಿ ಈ ಬಾರಿ ಕೃಷಿ – ಶಾಸಕ ರಘುಪತಿ ಭಟ್ ಹರ್ಷ

ಉಡುಪಿ: “ಹಡಿಲು ಭೂಮಿ ಕೃಷಿ ಅಂದೋಲನ”ದಡಿ ಚೇರ್ಕಾಡಿ ಪಂಚಾಯತ್ ವ್ಯಾಪ್ತಿಯಲ್ಲಿ 30 ಎಕರೆ ಕೇದಾರೋತ್ಥಾನ ಟ್ರಸ್ಟ್ ಮೂಲಕ ಹಾಗೂ 40 ಎಕರೆ ಸ್ಥಳೀಯ ಕೃಷಿಕರು ಹಡಿಲು ಕೃಷಿ ಭೂಮಿಗಳನ್ನು ಕೃಷಿ ಮಾಡುತ್ತಿದ್ದಾರೆ. ಸುಮಾರು 70 ಎಕರೆ ಭೂಮಿಯಲ್ಲಿ ಕೃಷಿ ಚಟುವಟಿಕೆಗಳು ನಡೆಯುತ್ತಿದ್ದು ಇಂದು ವೀಕ್ಷಿಸಲಾಯಿತು.

ಈಗಾಗಲೇ ತೋಡುಗಳ ಹೂಳೆತ್ತಿ ಪುನಃಶ್ಚೇತನಗೊಳಿಸುವ ಕಾರ್ಯ ಸಮಾರೋಪಾದಿಯಲ್ಲಿ ಸಾಗುತ್ತಿದ್ದು, ಸ್ಥಳೀಯ ಕೃಷಿಕರಿಗೆ ಕೃಷಿ ಮಾಡಲು ಉತ್ತೇಜನ ನೀಡಿ ಟ್ರಸ್ಟ್ ಮೂಲಕ ಸಹಕಾರ ನೀಡಲಾಗುತ್ತಿದೆ. ನಮ್ಮ ಈ ವಿನೂತನ ಕಾರ್ಯಕ್ರಮಕ್ಕೆ ಸ್ಥಳೀಯ ಕೃಷಿಕರು, ಊರಿನ ಹಿರಿಯರು, ಭೂ ಮಾಲಕರು ನಮ್ಮೊಂದಿಗೆ ಕೈಜೋಡಿಸಿ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಾ ಉತ್ಸಾಹದಿಂದ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದು ಎಲ್ಲರಿಗೂ ಶಾಸಕರು ಕೃತಜ್ಞತೆ ಸಲ್ಲಿಸಿದ್ದಾರೆ.

ಜಿಲ್ಲಾ ಪಂಚಾಯತ್ ಸದಸ್ಯ ಪ್ರತಾಪ್ ಹೆಗ್ಡೆ ಮಾರಾಳಿ, ಚೇರ್ಕಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೇಖಾ ಭಟ್, ಉಪಾಧ್ಯಕ್ಷ ಕಿಟ್ಟಪ್ಪ ಅಮೀನ್, ಪಂಚಾಯತ್ ಸದಸ್ಯ ನಾರಾಯಣ ನಾಯ್ಕ, ರಾಧಾಕೃಷ್ಣ ಸಾಮಂತ್, ಮಧುರ, ಪ್ರಭಾಕರ ಸ್ಥಳೀಯ ಮುಖಂಡ ಕಮಲಾಕ್ಷ ಹೆಬ್ಬಾರ್, ಹರೀಶ್ ಶೆಟ್ಟಿ ಚೇರ್ಕಾಡಿ, ಧನಂಜಯ ಅಮೀನ್ ಹಾಗೂ ಸ್ಥಳೀಯ ಕೃಷಿಕರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply