Janardhan Kodavoor/ Team KaravaliXpress
30.6 C
Udupi
Tuesday, August 16, 2022
Sathyanatha Stores Brahmavara

ಕಿದಿಯೂರು ಗ್ರಾಮ : 5 ಎಕರೆ ಹಡಿಲು ಭೂಮಿ ಕೃಷಿ ನಾಟಿಗೆ ಚಾಲನೆ

ಉಡುಪಿ: “ಹಡಿಲು ಭೂಮಿ ಕೃಷಿ ಅಂದೋಲನ”ದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 35 ಎಕರೆ ಹಡಿಲು ಭೂಮಿಯನ್ನು ಸಾವಯುವ ಕೃಷಿ ಮಾಡಲಾಗುತ್ತಿದ್ದು, ಮಂಗಳವಾರ ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಿದಿಯೂರು ಸಂಕೇಶ ವಿಠೋಬ ಭಜನಾ ಮಂಡಳಿಯ ಎದುರು 5 ಎಕರೆ ಹಡಿಲು ಭೂಮಿ ಕೃಷಿಯ ನಾಟಿ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ಮತ್ಸ್ಯೋದ್ಯಮಿ ಹರಿಯಪ್ಪ ಕೋಟ್ಯಾನ್ ರೊಂದಿಗೆ ಶಾಸಕ ಶ್ರೀ ಕೆ. ರಘುಪತಿ ಭಟ್ ಭೂ ಮಾತೆಗೆ ಹಾಲನ್ನು ಅರ್ಪಿಸುವ ಮೂಲಕ ಯಂತ್ರ ನಾಟಿಗೆ ಚಾಲನೆ ನೀಡಿದರು.ಶಾಸಕ,ವಿಧಾನಸಭೆಯ ಮುಖ್ಯ ಸಚೇತಕ ವಿ. ಸುನೀಲ್ ಕುಮಾರ್ ನೇಜಿ ನೀಡುವ ಮೂಲಕ ಕೈ ನಾಟಿಗೆ ಚಾಲನೆ ನೀಡಿದರು.ನೇಶನ್ ಫಸ್ಟ್ ತಂಡದ ಸರ್ವ ಸದಸ್ಯರು ಹಾಗೂ ಸ್ಥಳೀಯರು ಸಹಕರಿಸುತ್ತಿದ್ದು ಸರ್ವರಿಗೂ ಶಾಸಕರಾದ ಶ್ರೀ ಕೆ ರಘುಪತಿ ಭಟ್ ಅವರು ಅಭಿನಂದನೆ ಸಲ್ಲಿಸಿದರು.

ನಗರ ಸಭಾ ಸದಸ್ಯರಾದ ಹರೀಶ್ ಶೆಟ್ಟಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಅಂಬಲಪಾಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ರಾಜೇಂದ್ರ ಪಂದುಬೆಟ್ಟು, ನೇಶನ್ ಫಸ್ಟ್ ಸಂಚಾಲಕ ಸೂರಜ್, ಅಂಬಲಪಾಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ವೆಂಕಟರಮಣ ಕಿದಿಯೂರು, ಪ್ರಮುಖರಾದ ಹಿರಿಯಣ್ಣ ಕಿದಿಯೂರು, ವೇಣುಗೋಪಾಲ್, ಭಾಸ್ಕರ್ ಎ. ಕೋಟ್ಯಾನ್, ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಉಷಾ ಶೆಟ್ಟಿ, ಸುಜಾತ ಸುಧಾಕರ್, ಅಂಬಲಪಾಡಿ ಗ್ರಾಮೋತ್ಥಾನ ಸಮಿತಿಯ ಪ್ರಧಾನ ಸಂಚಾಲಕ ಶಿವಕುಮಾರ್ ಅಂಬಲಪಾಡಿ, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ಕೋಶಾಧಿಕಾರಿ ರಾಘವೇಂದ್ರ ಕಿಣಿ, ಸದಸ್ಯ ದಿನಕರ್ ಬಾಬು, ಹಾಗೂ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ಹಿರಿಯ ಕ್ಷೇತ್ರ ಅಧಿಕಾರಿ ಶಂಕರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಸಂತಿ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸದಸ್ಯರು, ಕೃಷಿಕರು, ಪ್ರಮುಖರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!