ಅ. 7 ರಂದು “ಉಡುಪಿ ಕೇದಾರ ಕಜೆ ಕುಚ್ಚಲಕ್ಕಿ” ಮುಂಬೈ ಮಾರುಕಟ್ಟೆಗೆ ಬಿಡುಗಡೆ

ಕೇದಾರೋತ್ಥಾನ ಟ್ರಸ್ಟ್ ಉಡುಪಿ ಮೂಲಕ ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಮ್ಮಿಕೊಂಡಿರುವ “ಹಡಿಲು ಭೂಮಿ ಕೃಷಿ ಅಂದೋಲನ”ದಡಿ ಹಡಿಲು ಭೂಮಿಯಲ್ಲಿ ಸಾವಯವ ಕೃಷಿ ಮಾಡಿ ಬೆಳೆದಿರುವ ಭತ್ತದಿಂದ ಉತ್ಪಾದಿಸಿದ ಸಂಪೂರ್ಣ ಸಾವಯುವ ಕುಚ್ಚಲಕ್ಕಿ “ಉಡುಪಿ ಕೇದಾರ ಕಜೆ” ಮುಂಬೈ ಭಾಗದಲ್ಲಿ ಅ. 7 ರಂದು ಮಾರುಕಟ್ಟೆ ಬಿಡುಗಡೆ ಮಾಡಲಿದ್ದು, ಕಾರ್ಯಕ್ರಮದ ಪೂರ್ವತಯಾರಿ ಬಗ್ಗೆ ಇಂದು ದಿನಾಂಕ 05-08-2022 ರಂದು ಮುಂಬೈ, ಕುರ್ಲಾ ಬಂಟರ ಸಂಘದಲ್ಲಿ ಉಡುಪಿ, ಮಂಗಳೂರು ಮೂಲದ ಮುಂಬೈ ಭಾಗದ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳೊಂದಿಗೆ ಶಾಸಕ ಶ್ರೀ ಕೆ ರಘುಪತಿ ಭಟ್ ಅವರು ಸಭೆ ನಡೆಸಿ ಚರ್ಚಿಸಿದರು.

ರೈತರಿಗೆ ಪ್ರೋತ್ಸಾಹ ನೀಡಬೇಕು. ಎಲ್ಲರೂ ಕೃಷಿ ಮಾಡುವಂತೆ ಪ್ರೇರೇಪಿಸಬೇಕು ಎಂಬ ಉದ್ದೇಶದಿಂದ ಕೇದಾರೋತ್ಥಾನ ಟ್ರಸ್ಟ್ ಉಡುಪಿ ಮುನ್ನಡಿಯಿಟ್ಟಿದ್ದು, ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ “ಹಡಿಲು ಭೂಮಿ ಕೃಷಿ ಅಂದೋಲನ” ಮಾಡಿ ಹಡಿಲು ಭೂಮಿಯಲ್ಲಿ ಸಾವಯವ ಕೃಷಿ ಮಾಡಿ ಬೆಳೆದಿರುವ ಭತ್ತದಿಂದ ಉತ್ಪಾದಿಸಿದ ಸಂಪೂರ್ಣ ಸಾವಯುವ ಕುಚ್ಚಲಕ್ಕಿಯನ್ನು ಉಡುಪಿ – ಮಂಗಳೂರು ಮೂಲದವರು ಇರುವ ದೇಶದ ಎಲ್ಲಾ ಭಾಗಗಳಲ್ಲಿ ಮಾರಾಟ ಮಾಡಲು ನಿರ್ಧರಿಸಿರುವಂತೆ ಮುಂಬೈನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಈ ಸಂದರ್ಭದಲ್ಲಿ ಮುಂಬೈ ಕುರ್ಲಾ ಬಂಟರ ಸಂಘದ ಸಂಘದ ಅಧ್ಯಕ್ಷರಾದ ಚಂದ್ರಹಾಸ ಕೆ. ಶೆಟ್ಟಿ, ಮುಂಬೈ, ಬಿಜೆಪಿ ಉಪಾಧ್ಯಕ್ಷರಾದ ಎರ್ಮಾಳು ಹರೀಶ್ ಶೆಟ್ಟಿ, ಮುಂಬೈ ಕುರ್ಲಾ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಆರ್. ಕೆ ಶೆಟ್ಟಿ, ಕಲಾ ಜಗತ್ತು ವಿಜಯ್ ಕುಮಾರ್ ಶೆಟ್ಟಿ, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಬಂಟರ ವಾಣಿ ಪ್ರಧಾನ ಸಂಪಾದಕರಾದ ಅಶೋಕ್ ಪಕಳ, ಶರತ್ ಹೆಗ್ಡೆ, ಪ್ರೇಮನಾಥ ಶೆಟ್ಟಿ ಕೊಂಡಾಡಿ, ಧನಂಜಯ ಶೆಟ್ಟಿ, ಲಕ್ಷ್ಮೀನಾರಾಯಣ ರೈ ಹರೆಕಳಾ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply