ಕಿದಿಯೂರು, ಕಪ್ಪೆಟ್ಟು ನೂತನ ಅಂಬೇಡ್ಕರ ಭವನವನ್ನು ಉದ್ಘಾಟಿಸಿದ ಶಾಸಕ ರಘುಪತಿ ಭಟ್

ಉಡುಪಿ : ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಉಡುಪಿ ಮತ್ತು ಅಂಬಲಪಾಡಿ ಗ್ರಾಮ ಪಂಚಾಯತ್ ಇವರ ಸಂಯುಕ್ತ ಆಶ್ರಯದಲ್ಲಿ ಕಿದಿಯೂರು, ಕಪ್ಪೆಟ್ಟು ಭಾಗದಲ್ಲಿ ನಿರ್ಮಿಸಿರುವ ನೂತನ ಅಂಬೇಡ್ಕರ್ ಭವನವನ್ನು ಇಂದು ಶಾಸಕ ಕೆ. ರಘುಪತಿ ಭಟ್ ಉದ್ಘಾಟಿಸಿ ಶುಭ ಹಾರೈಸಿದರು.

ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೋಹಿಣಿ ಎಸ್. ಪೂಜಾರಿ, ಉಪಾಧ್ಯಕ್ಷ ಸೋಮನಾಥ್ ಬಿ.ಕೆ, ಅಂಬೇಡ್ಕರ್ ಭವನದ ಅಧ್ಯಕ್ಷ ಮಂಜುನಾಥ್ ಕಪ್ಪೆಟ್ಟು, ದಲಿತ ಮುಖಂಡ ಜಯನ್ ಮಲ್ಪೆ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಮೇಶ್, ಅಂಬಲಪಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಸಂತಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply