ಕನ್ನಡ ಜಾನಪದ ಪರಿಷತ್ ವತಿಯಿಂದ ಆಹಾರ ಧಾನ್ಯಗಳ ಕಿಟ್ ವಿತರಣೆ

ಉಡುಪಿ: ಕನ್ನಡ ಜಾನಪದ ಪರಿಷತ್ ರಾಜ್ಯ ಘಟಕ ಬೆಂಗಳೂರು ಮತ್ತು ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ಮೂಲ್ಲಿ ಕಟ್ಟೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ವಾಸವಾಗಿರುವ ವಲಸೆ ಬಂದ 35 ಕುಟುಂಬಕ್ಕೆ ಹಾಗೂ ಆಶಾ ಕಾರ್ಯ ಕರ್ತೆಯರಿಗೆ ಆಹಾರ ಧಾನ್ಯಗಳ ಕಿಟ್ ವಿತರಿಸಲಾಯಿತು.

ಗಂಗೊಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ನಂಜ ನಾಯಕ್ ಹಾಗೂ ಪ್ರೋಭೇಷನರಿ ಪಿ ಎಸ್ ಐ ವಿನಯ್, ಹೆಡ್ ಕಾನ್ಸ್ಟೇಬಲ್ ಯೋಗೀಶ್, ಕನ್ನಡ ಜಾನಪದ ಪರಿಷತ್ತಿನ ಉಡುಪಿ ಜಿಲ್ಲಾ ಘಟದ ಜಿಲ್ಲಾಧ್ಯಕ್ಷ ಗಣೇಶ್ ಗಂಗೊಳ್ಳಿ, ಕನ್ನಡ ಜಾನಪದ ಪರಿಷತ್ ಬೈಂದೂರು ತಾಲೂಕು ಅಧ್ಯಕ್ಷ ನಳಿನ್ ಕುಮಾರ್ ಶೆಟ್ಟಿ, ಗ್ರಾಮ ಪಚಾಯತಿ ಮುಲ್ಲಿ ಕಟ್ಟೆಯ ಶಿವಾನಂದ, ದಿವ್ಯ ಶ್ರೀ ಹಾಗೂ ಸಾವಿತ್ರಿ ಮೋವಡಿ ಉಪಸ್ಥಿತರಿದ್ದರು. ರಾಜ್ಯಾಧ್ಯಕ್ಷ ಡಾ.ಎಸ್ ಬಾಲಾಜಿ ಕರಾವಳಿ ವಿಭಾಗೀಯ ಸಂಚಾಲಕಿ ಡಾ.ಭಾರತಿ ಮರವಂತೆಯ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ನಡೆಯಿತು.

 
 
 
 
 
 
 
 
 
 
 

Leave a Reply