ರಸ್ತೆ ಅಪಘಾತಗೊಂಡು, ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಇತರರಿಗೆ ಜೀವದ ಸಾರ್ಥಕತೆ

ಉಡುಪಿ ಜಿಲ್ಲೆಯ ಕೆಮ್ಮಣ್ಣು ನಿವಾಸಿ 46 ವರ್ಷದ ಶ್ರೀ ಜೋ ವಿಕ್ಟರ್ ಲೂಯಿಸ್ ಅವರಿಗೆ ರಸ್ತೆ ಅಪಘಾತ ಸಂಭವಿಸಿತ್ತು. ತೀವ್ರ ಗಾಯಗಳ ನಂತರ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಯಿತು, ಸಂಪೂರ್ಣ ವೈದ್ಯಕೀಯ ಚಿಕೆತ್ಸೆಯ ಹೊರತಾಗಿಯೂ ಶ್ರೀ ಲೂಯಿಸ್ ಅವರು ಚೇತರಿಸಿಕೊಳ್ಳುವ ಯಾವುದೇ ಲಕ್ಷಣಗಳು ಕಂಡುಬರಲಿಲ್ಲ . ಮಾನವ ಅಂಗಾಂಗ ಕಸಿ ಕಾಯಿದೆ 1994 ರ ಪ್ರಕಾರ ಪರಿಣಿತ ವೈದ್ಯರ ಸಮಿತಿಯು ಎರಡು ಬಾರಿ ಅಧಿಕೃತವಾಗಿ ಬ್ರೈನ್ ಡೆಡ್ ಎಂದು ಘೋಷಿಸಿತು, ಅವರ ಕುಟುಂಬವು ಅವರ ಕಾರ್ಯಸಾಧ್ಯವಾದ ಅಂಗಗಳನ್ನು ದಾನ ಮಾಡುವ ಧೈರ್ಯದ ನಿರ್ಧಾರವನ್ನು ತೆಗೆದುಕೊಂಡಿತು, ಆ ಮೂಲಕ ಅಗತ್ಯವಿರುವ ಇತರರಿಗೆ ಅಂಗ ದಾನ ಮಾಡಲು ನಿರ್ಧರಿಸಿತು.

ಜೀವಸಾರ್ಥಕಥೆ, ಸೊಟ್ಟೊ ಬೆಂಗಳೂರು ಇವರ ನಿಯಮಾವಳಿಗಳನ್ನು ಅನುಸರಿಸಿ, ಶ್ರೀ ಲೂಯಿಸ್ ಅವರ ಯಕೃತ್ತನ್ನು ಕೆಎಂಸಿ ಆಸ್ಪತ್ರೆ, ಅಂಬೇಡ್ಕರ್ ಸರ್ಕಲ್, ಮಂಗಳೂರು, ಒಂದು ಕಿಡ್ನಿಯನ್ನು ಮಂಗಳೂರಿನ ಯೆನೆಪೊಯ ಆಸ್ಪತ್ರೆಗೆ ಮತ್ತು ಒಂದು ಕಿಡ್ನಿಯನ್ನು ಮಂಗಳೂರಿನ ಇಂಡಿಯಾನಾ ಆಸ್ಪತ್ರೆಗೆ ಕಳುಹಿಸಲಾಯಿತು. ಎರಡು ಕಾರ್ನಿಯಾಗಳನ್ನು ಮತ್ತು ಚರ್ಮವನ್ನು ಮಣಿಪಾಲದಲ್ಲಿನ ನೋಂದಾಯಿತ ರೋಗಿಗಳಿಗೆ ಬಳಸಲು ಉಳಿಸಿಕೊಳ್ಳಲಾಯಿತು.

ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಅವರು, ಅಂಗಾಂಗ ದಾನದ ಕಾರ್ಯವು ಜೀವ ಉಳಿಸುವ ಉದಾತ್ತ ಪ್ರಯತ್ನವಾಗಿದೆ ಎಂದು ಶ್ಲಾಘಿಸಿ, ಇತರರು ಇಂತಹ ಪರಹಿತಚಿಂತನೆಯನ್ನು ಮೈಗೂಡಿಸಿಕೊಳ್ಳುವಂತೆ ಪ್ರೇರೇಪಿಸಿದರು. ಈ ಸಹಾನುಭೂತಿಯ ನಿರ್ಧಾರಕ್ಕಾಗಿ ಅವರು ಶ್ರೀ ಲೂಯಿಸ್ ಅವರ ಕುಟುಂಬಕ್ಕೆ ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸಿದರು.

 
 
 
 
 
 
 
 
 
 
 

Leave a Reply