Janardhan Kodavoor/ Team KaravaliXpress
23.6 C
Udupi
Friday, December 2, 2022
Sathyanatha Stores Brahmavara

ಕೊಡವೂರಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಮಲ್ಪೆಯ ಉಪಕೇಂದ್ರದ ಉದ್ಘಾಟನೆ

ಕೊಡವೂರು ಪರಿಸರದಲ್ಲಿ ಅನೇಕ ಬಡವರು ಮತ್ತು ಮಧ್ಯಮ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಾಗಿದ್ದಾರೆ.ಖಾಸಗಿ ಆಸ್ಪತ್ರೆಯಲ್ಲಿ ತಪಾಸಣೆಯನ್ನು ಮಾಡಲು ಸಾವಿರಾರು ರೂಪಾಯಿ ವೆಚ್ಚವಾಗುತ್ತದೆ.

ಆದರಿಂದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಹತ್ತಿರದಲ್ಲಿಯೇ ಉತ್ತಮವಾದ ಮತ್ತು ಉಚಿತವಾಗಿ ಆರೋಗ್ಯ ಸೇವೆ ಪಡೆಯಬೇಕಾದರೆ ನಮ್ಮ ಪರಿಸರದಲ್ಲಿಯೇ ಆರೋಗ್ಯ ಕೇಂದ್ರ ಬೇಕು ಎಂದು ಹಲವಾರು ವರ್ಷಗಳಿಂದ ವೈದ್ಯಾಧಿಕಾರಿ ಮತ್ತು ಸರಕಾರಕ್ಕೆ ಹೋರಾಟದ ಮುಖಾಂತರ ಇಂದು ನಮ್ಮ ವಾರ್ಡಿನಲ್ಲಿ ಸರ್ಕಾರಿ ಆರೋಗ್ಯ ಕೇಂದ್ರ ಪಡೆಯಲು ಆಗಿದೆ ಮತ್ತು ಇನ್ನು ಮುಂದಿನ ದಿನಗಳಲ್ಲಿ ಉತ್ತಮವಾದ ಸೇವೆಯೊಂದಿಗೆ ಪ್ರತಿಯೊಬ್ಬರಿಗೂ ಉಚಿತವಾಗಿ ಸರಕಾರದ ಎಲ್ಲಾ ಸವಲತ್ತುಗಳನ್ನು ಮನೆ – ಮನೆಗೆ ತಲುಪಿಸುವ ಜವಾಬ್ದಾರಿ ನನ್ನದು ಎಂದು ನಗರ ಸಭಾ ಸದಸ್ಯರಾದ ವಿಜಯ್ ಕೊಡವೂರು ತಿಳಿಸಿದರು.

ಇನ್ನು ಮುಂದಿನ ದಿನಗಳಲ್ಲಿ ಬೆನ್ನು ಮೂಳೆ ಮುರಿತಕ್ಕೆ ಒಳಗಾದವರಿಗೆ ಮತ್ತು ದಿವ್ಯಾಂಗರಿಗೆ ಮನೆಯಿಂದ ಹೊರ ಬರಲು ಸಾಧ್ಯವಿಲ್ಲದವರಿಗೆ ಮನೆ – ಮನೆಗೆ ತೆರಳಿ ಅವರ ಆರೋಗ್ಯ ತಪಾಸಣೆಯನ್ನು ಮಾಡಲಾಗುವುದು ಎಂದರು.

ಈ ಸಂದರ್ಬದಲ್ಲಿ ಸಿ. ಎ. ಬ್ಯಾಂಕ್ ಅಧ್ಯಕ್ಷರಾದ ನಾರಾಯಣ್ ಬಲ್ಲಾಳ್, ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ಇದರ ಅಧ್ಯಕ್ಷರಾದ ಜನಾರ್ಧನ ಕೊಡವೂರು,ಪ್ರಭಾತ್ ಕೊಡವೂರು,ಶ್ರೀ ಶಂಕರನಾರಾಯಣ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಶ್ರೀಮತಿ ಚಂದ್ರಾವತಿ ಸುರೇಶ್ ಕಾನಂಗಿ, ಶೇಕರ್ ಮೊಗವೀರ, ಕೃಷ್ಣ ಅಮೀನ್ ಮೂಡುಬೆಟ್ಟು,ಯಶೋಧಾ ರಾಜೇಂದ್ರ ಬಾಚನಬೈಲು, ಮತ್ತಿತರರು ಹಾಜರಿದ್ದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!