ವ್ಯಕ್ತಿ ನಾಪತ್ತೆ

ಉಡುಪಿ, ಸೆಪ್ಟಂಬರ್ 22: ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ರಾಜಾರಾಮ (55) ಎಂಬ ವ್ಯಕ್ತಿಯು 2021 ಆಗಸ್ಟ್ 24 ರಂದು ಸಂಜೆ 5.30 ರ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

168 ಸೆಂ.ಮೀ ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ವೃತ್ತ ಕಚೇರಿ ಮೊ.ನಂ: 9480805432, ಕೋಟ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2564155, 9480805454 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 
 
 
 
 
 
 
 
 
 
 

Leave a Reply