ಉತ್ಸವಗಳಿಗೆ ನಿರ್ಬಂಧವಿಲ್ಲ ಆದರೆ ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯ: ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು:ರಾಜ್ಯದಲ್ಲಿ ಕೊರೋನಾ 2ನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆ ಈಗಿನ ಪರಿಸ್ಥಿತಿಯಲ್ಲಿ ಯಾವುದೇ ದೇವಸ್ಥಾನಗಳನ್ನು ಮುಚ್ಚುವುದಿಲ್ಲ.ಯಾವುದೇ ಉತ್ಸವಗಳಿಗೂ ಸರಕಾರ ನಿರ್ಬಂಧ ವಿಧಿಸಿಲ್ಲ.ಆದರೆ ಕೋವಿಡ್-19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಿಕೊಂಡು ಮುಂದುವರಿಯಲು ಸೂಚಿಸಲಾಗಿದೆ ಎಂದು ಧಾರ್ಮಿಕ ದತ್ತಿ ಇಲಾಖಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ದೇವಸ್ಥಾನಗಳನ್ನು ಮುಚ್ಚುವ ಅನಿವಾರ್ಯತೆ ಇಲ್ಲ ಮತ್ತು ಯಾವುದೇ ಉತ್ಸವಗಳಿಗೆ ಸರಕಾರ ನಿರ್ಬಂಧ ಹೇರಿಲ್ಲ.ಆದರೆ ಕೊರೋನಾ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಲಾಗಿದೆ.ಈ ನಿಟ್ಟಿನಲ್ಲಿ ದೇವಸ್ಥಾನಕ್ಕೆ ಬರುವ ಭಕ್ತಾದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಪಾಲನೆ ಮಾಡಬೇಕು ಮತ್ತು ಶುಚಿತ್ವಕ್ಕೆ ಆದ್ಯತೆ ನೀಡಬೇಕು ಎಂದು ತಿಳಿಸಿದ್ದಾರೆ.

ನೇಮ, ಕೋಲ ಇತ್ಯಾದಿ ಕಾರ್ಯಕ್ರಮಗಳಿಗೂ ಸಾವಿರಾರು ಸಂಖ್ಯೆಯಲ್ಲಿ ಜನ ಸೇರುವ ಸಾಧ್ಯತೆ ಇರುವುದರಿಂದ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುತ್ತಾ, ಕೋವಿಡ್ ನಿಯಂತ್ರಣದಲ್ಲಿಟ್ಟುಕೊಂಡೇ ಧಾರ್ಮಿಕ ಕೆಲಸಗಳನ್ನು ಸಾಂಕೇತಿಕವಾಗಿ ಮಾಡಲು ತೀರ್ಮಾನ ಮಾಡಿ ಅದೇ ರೀತಿ ಸೂಚನೆ ನೀಡಲಾಗಿದೆ.ಕೋಲ, ನೇಮ ಇತ್ಯಾದಿಗಳಿಗೆ ಸಾವಿರಾರು ಸಂಖ್ಯೆಯಲ್ಲಿ ಜನಸೇರುವ ಬದಲು ನೂರಿನ್ನೂರಕ್ಕೆ ಸೀಮಿತಗೊಳಿಸುವುದು ಉತ್ತಮ ಎಂದು ಸಚಿವರು ಹೇಳಿದ್ದಾರೆ.

 
 
 
 
 
 
 
 
 
 
 

Leave a Reply