ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೋಂ ಕ್ವಾರಂಟೈನ್

ಉಡುಪಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿರುವುದರಿಂದ ಅವರ ಸಂಪರ್ಕಕ್ಕೆ ಬಂದಿರುವ ದಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಮ್ಮ ಸ್ವಗೃಹದಲ್ಲಿ ಕ್ವಾರಂಟೈನ್ ಆಗಿದ್ದಾರೆ. 

ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಜುಲೈ 30ರಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿ ಯಾಗಿದ್ದು, ಭಾನುವಾರ ಮುಖ್ಯಮಂತ್ರಿಯವರಿಗೆ ಪಾಸಿಟಿವ್ ದೃಢಪಟ್ಟಿರುವುದರಿಂದ ಪೂಜಾರಿಯವರು ತನ್ನ ಕೋಟದಲ್ಲಿರುವ ಮನೆಯಲ್ಲಿ ಕ್ವಾರಂಟೈನ್ ಆಗಿದ್ದಾರೆ.

 
 
 
 
 
 
 
 
 

Leave a Reply