ಕಾಪು ಪುರಸಭೆಯ ಎಲ್ಲಾ ಸ್ಥಾನಗಳನ್ನು ಗೆಲ್ಲುವ ಗುರಿ ಇದೆ- ಕುಯಿಲಾಡಿ ಸುರೇಶ್ ನಾಯಕ್

ಉಡುಪಿ : ಡಿ.27ರಂದು ನಡೆಯಲಿರುವ ಕಾಪು ಪುರಸಭೆಯ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ. ಕಾಪು ಪುರಸಭೆಯ ಎಲ್ಲಾ ಸ್ಥಾನಗಳನ್ನೂ ಗೆಲ್ಲುವ ಗುರಿಯೊಂದಿಗೆ ಬಿಜೆಪಿ ಸಂಘಟಿತ ಪ್ರಯತ್ನದ ಮೂಲಕ ಚುನಾವಣೆಯನ್ನು ಸಮರ್ಪಕವಾಗಿ ಎದುರಿಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಡಿ.1ರಂದು ಕಾಪು ಪುರಸಭಾ ಚುನಾವಣೆಯ ಪೂರ್ವಭಾವಿಯಾಗಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪಕ್ಷದ ಪ್ರಮುಖರ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

 

ಕೇಂದ್ರ ಮತ್ತು ರಾಜ್ಯ ಸರಕಾರದ ಜನಪರ ಯೋಜನೆಗಳು, ಕಳೆದ ಮೂರೂವರೆ ವರ್ಷದ ಅವಧಿಯಲ್ಲಿ ಶಾಸಕರ ನೇತೃತ್ವದಲ್ಲಿ ನಡೆದ ಅಭಿವೃದ್ಧಿ ಕೆಲಸ ಕಾರ್ಯಗಳು ಕಾಪು ಪುರಸಭೆ ಚುನಾವಣೆಯ ಗೆಲುವಿಗೆ ಪೂರಕವೆನಿಸಲಿದೆ.

ಕಾಪು ಪುರಸಭೆ ವ್ಯಾಪ್ತಿಗೆ ಶಾಶ್ವತ ಕುಡಿಯುವ ನೀರಿನ ಯೋಜನೆಗೆ ರೂಪುರೇಷೆಗಳನ್ನು ಸಿದ್ಧಪಡಿಸಲಾಗಿದ್ದು ಮುಂದಿನ ದಿನಗಳಲ್ಲಿ ಈ ಯೋಜನೆಯು ಕಾರ್ಯಗತಗೊಳ್ಳಲಿದೆ. ಕ್ಷೇತ್ರದ ಜನತೆ ಯಾವತ್ತೂ ಅಭಿವೃದ್ಧಿ ಪರ ಆಡಳಿತಕ್ಕೆ ಸ್ಪಂದಿಸುತ್ತಾರೆ ವಿನಹ ಕಾಂಗ್ರೆಸ್ ನ ಅಪಪ್ರಚಾರಕ್ಕೆ ಮಣೆ ಹಾಕುವುದಿಲ್ಲ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದು ಕುಯಿಲಾಡಿ ಹೇಳಿದರು.

ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್, ಪೆರ್ಣಂಕಿಲ ಶ್ರೀಶ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಕೋಶಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಬಿಜೆಪಿ ಕಾಪು ಮಂಡಲಾಧ್ಯಕ್ಷ ಶ್ರೀಕಾಂತ್ ನಾಯಕ್ ಅಲೆವೂರು, ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ಶೆಟ್ಟಿ ಮಾಂಬೆಟ್ಟು, ಗೋಪಾಲಕೃಷ್ಣ ರಾವ್ ಮಟ್ಟು, ಕಾಪು ಮಂಡಲ ನಿಕಟಪೂರ್ವ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪಕ್ಷದ ಪ್ರಮುಖರಾದ ಗಂಗಾಧರ ಸುವರ್ಣ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply