ಕಾಡೂರು ಗ್ರಾಮ ಪಂಚಾಯಿತಿ ಸಭೆ

ಬ್ರಹ್ಮಾವರ : ಕಾಡೂರು-ನಡೂರಿನ ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ತಂತಿಗಳು ತೀರಾ ಕೆಭಾಗದಲ್ಲಿ ಅಪಾಯಕಾರಿ ಸ್ಥಿತಿಯಲ್ಲಿ ನೇತಾಡುತ್ತಿದ್ದು ಇದರಿಂದ ಸಮಸ್ಯೆ ಎದುರಾಗುವ ಮೊದಲು ಸರಿಪಡಿಸುವುದರೊಂದಿಗೆ ಶಾಸಕರ ಮಾದರಿ ವಿದ್ಯುತ್ ಗ್ರಾಮ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡಬೇಕೆಂದು ಇಂದು ನಡೆದ ಕಾಡೂರು ಗ್ರಾಮಸಭೆಯಲ್ಲಿ ಗ್ರಾಮಸ್ಥರು ಆಗ್ರಹಿಸಿದರು.

ಕಾಡೂರು ಗ್ರಾಪಂನಲ್ಲಿ ಜರಗಿದ ಸಭೆಯಲ್ಲಿ ಈ ಕುರಿತು ಮಾತನಾಡಿದ ಗ್ರಾಪಂ ಮಾಜಿ ಅಧ್ಯಕ್ಷ ಸುರೇಶ ಶೆಟ್ಟಿ, ವಿಳಂಬದಿಂದ ಯೋಜನೆಯ ಗುಣ ಮಟ್ಟಕ್ಕೂ ತೊಂದರೆಯಾಗುವುದರಿಂದ ಮೆಸ್ಕಾಂ ಈ ಕುರಿತು ಆದ್ಯತೆಯಿಂದ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಗ್ರಾಪಂ ಅಧ್ಯಕ್ಷ ಪಾಂಡುರಂಗ ಶೆಟ್ಟಿ ಮಾತನಾಡಿ ಜಲಜೀವನ್ ಮಿಷನ್ ಯೋಜನೆ, ಮಹಿಳಾ ಕಾಯಕೋತ್ಸವ ಹಾಗೂ ಒಡಿ ಎಫ್ ಪ್ಲಸ್ ಸಮೀಕ್ಷೆಗಳು ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯುತ್ತಿದ್ದು, ಪಂಚಾಯತ್‌ನ ಸಮಗ್ರ ಅಭಿವೃದ್ದಿಗೆ ವ್ಯವಸ್ಥಿತ ರೀತಿಯಲ್ಲಿ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಮಹಿಳೆಯರ ಆರ್ಥಿಕ ಸ್ವಾವಲಂಬನೆ ಕುರಿತು ಉಪನ್ಯಾಸಕಿ ಸವಿತಾ ಎರ್ಮಾಳ್, ಮಂದರ್ತಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅನಿಲ್ ಕುಮಾರ್, ಗ್ರಾಪಂ ಉಪಾಧ್ಯಕ್ಷೆ ಅಮಿತಾ ರಾಜೇಶ್ ಮಾತನಾಡಿದರು.

ಇದೇ ಸಂದರ್ಭದಲ್ಲಿ ಸ್ಥಳೀಯ ಮಹಿಳೆಯರು ತಯಾರಿಸಿದ ಉತ್ಪನ್ನಗಳ ಬಿಡುಗಡೆ ಹಾಗೂ ಖರೀದಿಗೆ ಚಾಲನೆ ನೀಡಲಾಯಿತು. ಕೃಷಿ, ಅರಣ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ಕಂದಾಯ, ಶಿಕ್ಷಣ, ಮೆಸ್ಕಾಂ ಸೇರಿದಂತೆ ಇಲಾಖಾಧಿಕಾರಿಗಳು ಮಾಹಿತಿ ನೀಡಿದರು. ನೋಡೆಲ್ ಅಧಿಕಾರಿಯಾಗಿ ಕೃಷಿ ಅಧಿಕಾರಿ ಚಂದ್ರಶೇಖರ ಶೆಟ್ಟಿ ಭಾಗವಹಿಸಿದ್ದರು. ಪಂಚಾಯತ್ ಅಭಿವೃದ್ದಿ ಅಧಿಕಾರಿ ಮಹೇಶ್ ಕಾರ್ಯಕ್ರಮ ನಿರೂಪಿಸಿದರು.

 
 
 
 
 
 
 
 
 
 
 

Leave a Reply