ಮಣಿಪಾಲ ಆಸ್ಪತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ ಗೆ ಸಿಗಲಿಲ್ಲ ಬೆಡ್ – ಇನ್ನು ಜನ ಸಾಮಾನ್ಯರ ಗತಿ ಏನು..?

ಬೆಂಗಳೂರು:ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕೊರೋನಾ ಸೋಂಕು ತಗಲಿದ್ದು ಚಿಕಿತ್ಸೆ ಪಡೆಯಲು ಮಣಿಪಾಲ್ ಆಸ್ಪತ್ರೆ ಸೇರಬಯಸಿದ ಅವರಿಗೆಗೆ ಬೆಡ್ ಸಿಕ್ಕಿಲ್ಲ.ಸದ್ಯ ಇದು ಜನ ಸಾಮಾನ್ಯರಲ್ಲಿ ಆತಂಕ ಮೂಡಿಸಿದೆ.

ಕುಮಾರಸ್ವಾಮಿಯಂತಹ ಪ್ರಭಾವಿ ನಾಯಕರಿಗೇ ಈ ಸ್ಥಿತಿ ಬಂದಿರುವಾಗ ಸೋಂಕು ತಗಲಿರುವ ಸಾಮಾನ್ಯ ಜನರು ಚಿಕಿತ್ಸೆಗಾಗಿ ಬೆಡ್ ಪಡೆಯಲು ಏನು ಮಾಡಬೇಕು ಎಂಬ ಮಾತು ಕೇಳಿ ಬರತೊಡಗಿದೆ. ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಯ ಪ್ರಚಾರಕ್ಕೆ ಹೋಗಿದ್ದ ಕುಮಾರಸ್ವಾಮಿ ಅವರಿಗೆ ನಿನ್ನೆ ಸಂಜೆಯೇ ದಣಿವು ಕಾಣಿಸಿಕೊಂಡಿದೆ. ಹೀಗಾಗಿ ಬೆಂಗಳೂರಿಗೆ ಮರಳಿದ ಅವರು, ಮನೆಗೆ ಹೋಗದೆ ಹೋಟೆಲ್ ಒಂದರಲ್ಲಿ ಉಳಿದುಕೊಂಡಿದ್ದರು. ಇಂದು ಬೆಳಿಗ್ಗೆ ವೈದ್ಯರನ್ನು ಸಂಪರ್ಕಿಸಿ ತಪಾಸಣೆಗೊಳಗಾದ ಅವರಿಗೆ ಕೋವಿಡ್ ಪಾಸಿಟಿವ್ ಧೃಢಪಟ್ಟಿದೆ.

 ವೈದ್ಯರ ಬಳಿ ಮಾತುಕತೆ ನಡೆಸಿ,ತಮ್ಮ ತೋಟದ ಮನೆಯಲ್ಲಿ ವಿಶ್ರಾಂತಿ ಪಡೆದು ಚಿಕಿತ್ಸೆ ಪಡೆಯುವುದಾಗಿ ಹೆಚ್. ಡಿ.ಕೆ ಹೇಳಿದ್ದಾರಾದರೂ ವೈದ್ಯರು ಅದನ್ನೊಪ್ಪಿಲ್ಲ. ಈ ವಿಷಯದಲ್ಲಿ ರಿಸ್ಕ್ ಬೇಡ. ಹೀಗಾಗಿ ತಕ್ಷಣವೇ ಆಸ್ಪತ್ರೆಗೆ ದಾಖಲಾಗಿ ಎಂದು ವೈದ್ಯರು ಸಲಹೆ ಮಾಡಿದ್ದಾರೆ. ಮಣಿಪಾಲ್ ಆಸ್ಪತ್ರೆಗೆ ಸೇರಲು ನಿರ್ಧರಿಸಿದ ಅವರು ಸಂಬಂಧಿಸಿದವರನ್ನು ಸಂಪರ್ಕಿಸಿದರೆ, ಬೆಡ್ ಇಲ್ಲ ಎಂಬ ಉತ್ತರ ಸಿಕ್ಕಿದೆ ಎಂದು ವಿಧಾನಪರಿಷತ್ ಸದಸ್ಯ ಎಚ್.ಎಂ.ರಮೇಶಗೌಡ ಮಾಹಿತಿ ನೀಡಿದ್ದಾರೆ.

 ವಿಷಯ ತಿಳಿದ ಕೂಡಲೇ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಕುಮಾರಸ್ವಾಮಿ ಅವರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಬೆಡ್ ದೊರಕಿಸಿಕೊಡಲು ಯತ್ನಿಸಿದರು ಅದು ಸಾಧ್ಯವಾಗಲಿಲ್ಲ. ಕುಮಾರಸ್ವಾಮಿ ಮತ್ತೊಂದು ಖಾಸಗಿ ಆಸ್ಪತ್ರೆಗೆ ಫೋನ್ ಮಾಡಿದ್ದರ ಫಲವಾಗಿ ಬೆಡ್ ದೊರೆತಿದೆ ಎಂಬ ಮಾಹಿತಿ ಬಂದಿದೆ ಎಂದು ಜೆಡಿಎಸ್ ಮೂಲಗಳು ಮಾಹಿತಿ ನೀಡಿವೆ.

 
 
 
 
 
 
 
 
 

Leave a Reply