ಕುರ್ಕಾಲು ಗ್ರಾಮೀಣ ಮಹಿಳಾ ಕಾಂಗ್ರೆಸ್ ವತಿಯಿಂದ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ

ಉಡುಪಿ: ಕುರ್ಕಾಲು ಗ್ರಾಮೀಣ ಮಹಿಳಾ ಕಾಂಗ್ರೆಸ್ ವತಿಯಿಂದ ಇಂದು ಸುಭಾಸ್ ನಗರ ಪೆಟ್ರೋಲ್ ಬಂಕ್ ಎದುರುಗಡೆ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಯಿತು.

ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಗೀತಾ ವಾಗ್ಳೆ ಭಾಗವಹಿಸಿ ಕೇಂದ್ರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಬಡವರನ್ನು ಹಗಲು ದರೋಡೆ ಮಾಡುವುದರಲ್ಲಿ ನಿರತವಾಗಿದೆ, ಅಧಿಕಾರಕ್ಕೆ ಬಂದರೆ ಎಲ್ಲರಿಗೂ ಅಚ್ಛೇದಿನ್ ತರುತ್ತೇವೆ ಎಂದವರು ಇಂದು ಯಾವುದೇ ಎಗ್ಗಿಲ್ಲದೆ ಬೆಲೆ ಏರಿಕೆ ,ಜಿ ಎಸ್ ಟಿ,ಮುಂತಾದುವುಗಳಿಂದ ಬಡ ಹಾಗೂ ಮಧ್ಯಮ ವರ್ಗದ ಜನರ ಬದುಕನ್ನೇ ದುಸ್ಥಿತಿಗೆ ತಂದು ನಿಲ್ಲಿಸಿದೆ.ಕೊರೋನಾ ಮಹಾಮಾರಿಯಿಂದಾಗಿ ಇಂದು ಜನತೆ ಒಂದು ಹೊತ್ತಿನ ಊಟಕ್ಕೂ ತತ್ತರಿಸುತ್ತಿರುವ ಈ ಸಂಕಷ್ಟ ಕಾಲದಲ್ಲಿ ಇಂಧನಗಳ ಬೆಲೆಯನ್ನು ಏರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ನಾವೆಲ್ಲರೂ ಸಮರ ಸಾರಬೇಕಾಗಿದೆ ಎಂದರು.

ಕುರ್ಕಾಲು ಗ್ರಾಮ ಪಂಚಾಯತ್ ಅಧ್ಯಕ್ಷರೂ, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಮಹೇಶ್ ಶೆಟ್ಟಿ, ಗ್ರಾಮೀಣ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನತಾಲಿಯಾ ಮಾರ್ಟಿಸ್,ಉಡುಪಿ ಜಿಲ್ಲಾ ಸಾಮಾಜಿಕ ಜಾಲತಾಣ ವಿಭಾಗದ ಉಪಾಧ್ಯಕ್ಷ ಪ್ರಭಾಕರ ಆಚಾರ್ಯ,ಕುರ್ಕಾಲು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸಿಮಿ ಮತ್ತು ಇತರ ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

 
 
 
 
 
 
 
 
 
 
 

Leave a Reply