ಮಲ್ಪೆ ಬೀಚ್‌ನಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ

ಉಡುಪಿ: ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಮಲ್ಪೆ ಅಭಿವೃದ್ಧಿ ಸಮಿತಿ, ನೆಹರು ಯುವ ಕೇಂದ್ರ, ಕರಾವಳಿ ಪ್ರವಾಸೋದ್ಯಮ ಸಂಘಟನೆ ಉಡುಪಿ ಜಿಲ್ಲೆ ಹಾಗೂ ಸ್ಕೌಟ್ ಮತ್ತು ಗೈಡ್ಸ್ ಇವರ ಸಹಯೋಗದೊಂದಿಗೆ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು, ಪ್ರವಾಸೋದ್ಯಮ ಹಾಗೂ ಗ್ರಾಮೀಣಾಭಿವೃದ್ಧಿ ಎಂಬ ಸಂದೇಶದೊಂದಿಗೆ ಸೆಪ್ಟಂಬರ್ 27 ರಂದು ಬೆಳಗ್ಗೆ 9ಗಂಟೆಗೆ ಮಲ್ಪೆ ಬೀಚ್‌ನಲ್ಲಿ ಆಚರಿಸಲಾಗುವುದು.

ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಮತ್ತು ಸಹಕಾರ ಸಚಿವ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದು, ಉಡುಪಿ ಶಾಸಕ ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಕಾರ‍್ಯಕ್ರಮದಲ್ಲಿ ಪ್ರವಾ ಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಸಿ.ಟಿ ರವಿ, ಮೀನುಗಾರಿಕೆ ಮತ್ತು ಬಂದರು ಹಾಗೂ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ವಿ.ಸುನೀಲ್ ಕುಮಾರ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಲಾಲಾಜಿ.ಆರ್.ಮೆಂಡನ್, ಬಿ.ಎಂ.ಸುಕುಮಾರ ಶೆಟ್ಟಿ, ರಾಜ್ಯ ಸಭಾ ಸದಸ್ಯ ಓಸ್ಕರ್ ಫೆರ್ನಾಂಡೀಸ್, ಸಂಸದರುಗಳಾದ ಶೋಭಾ ಕರಂದ್ಲಾಜೆ, ಬಿ.ವೈ.ರಾಘವೇಂದ್ರ, ವಿಧಾನಪರಿಷತ್ ಶಾಸಕರುಗಳಾದ ಆಯನೂರು ಮಂಜುನಾಥ, ಎಸ್.ಎಲ್.ಭೋಜೆಗೌಡ, ಡಾ||ತೇಜಸ್ವಿನಿ ಗೌಡ, ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ,

ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎ.ರಾಘವೇಂದ್ರ ಕಿಣಿ, ತಾಲೂಕು ಪಂಚಾಯತ್ ಅಧ್ಯಕ್ಷೆ ಸಂಧ್ಯಾ ಕಾಮತ್, ಪ್ರದಾನ ಕಾರ್ಯದರ್ಶಿ, ಕಂದಾಯ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ ಮಹೇಶ್ವರ ರಾವ್, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋತ್, ಕರಾವಳಿ ಕಾವಲು ಪೊಲೀಸ್ ಅಧೀಕ್ಷಕ ಚೇತನ್ ಆರ್, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್ ಹಾಗೂ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ.ಕೆ ಶೆಟ್ಟಿ, ಕರಾವಳಿ ಪ್ರವಾಸೋದ್ಯಮ ಸಂಘಟನೆಯ ಅಧ್ಯಕ್ಷ ಮನೋಹರ ಶೆಟ್ಟಿ ಸೇರಿದಂತೆ ಮತ್ತಿತರ ಗಣ್ಯ ವ್ಯಕ್ತಿಗಳು ಭಾಗವಹಿಸಲಿದ್ದಾರೆ.

 
 
 
 
 
 
 
 
 
 
 

Leave a Reply