ಮಲ್ಪೆ ಬೀಚ್‌ನಲ್ಲಿ ತೇಲುವ ಸೇತುವೆ ಉದ್ಘಾಟನೆ

ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸ್ಥಳೀಯರ ಸಹಕಾರದಲ್ಲಿ ರಾಜ್ಯದಲ್ಲೇ ಪ್ರಥಮ ಎಂಬಂತೆ ಮಲ್ಪೆ ಬೀಚ್‌ನಲ್ಲಿ ತೇಲುವ ಸೇತುವೆ ನಿರ್ಮಿಸಲಾಗಿದ್ದು ಇದರ ಉದ್ಘಾಟನಾ ಕಾರ್ಯಕ್ರಮ ಭಾನುವಾರ ನಡೆಯಿತು. ಶಾಸಕ ಕೆ. ರಘುಪತಿ ಭಟ್ ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು.

ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಪೊಲೀಸ್ ವರಿಷ್ಠಾಧಿಕಾರಿಗಳಾದ ಹಾಕೆ ಅಕ್ಷಯ್ ಮಚ್ಚಿಂದ್ರ, ಮಲ್ಪೆ ಬೀಚ್ ನಿರ್ವಾಹಕರಾದ ಸುದೇಶ್ ಶೆಟ್ಟಿ, ಪಾಲುದಾರರಾದ ಶೇಖರ್ ಪುತ್ರನ್, ಧನಂಜಯ ಕಾಂಚನ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply