ಮಲ್ಪೆ : ಗ್ರಾನೈಟ್ ಅನ್ ಲೋಡ್ ವೇಳೆ ಅಡಿಯಲ್ಲಿ ಸಿಲುಕಿ ಇಬ್ಬರು ಕಾರ್ಮಿಕರ ದುರ್ಮರಣ

ಲಾರಿಯಿಂದ ಗ್ರಾನೈಟ್ ಅನ್ ಲೋಡ್ ಮಾಡುವಾಗ ಅವಘಡ ಸಂಭವಿಸಿ ಇಬ್ಬರು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.

ಮೃತರನ್ನು ಓರಿಸ್ಸಾದ ಕಾರ್ಮಿಕರಾದ ಬಾಬುಲ್ಲ (35) ಮತ್ತು ಭಾಸ್ಕರ (35) ಎಂದು ಗುರುತಿಸಲಾಗಿದೆ.

ತೊಟ್ಟಂ ನಲ್ಲಿ ನಿರ್ಮಾಣವಾಗುತ್ತಿರುವ ಮನೆಯೊಂದಕ್ಕೆ ಕಂಟೈನರ್ ಲಾರಿಯಲ್ಲಿ ತಂದಿದ್ದ ಗ್ರಾನೈಟ್ ಇಳಿಸುತ್ತಿರುವಾಗ ಲಾರಿಯೊಳಗೆ ಗ್ರಾನೈಟ್ ಜಾರಿ ಮೈಮೇಲೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

 
 
 
 
 
 
 
 
 
 
 

Leave a Reply