ಮಂಗಳೂರಿನಲ್ಲಿ ರಾಗಿಂಗ್ ನಡೆಸಿದ 9 ವಿದ್ಯಾರ್ಥಿಗಳ ಬಂಧನ

ಮಂಗಳೂರು : ರಾಗಿಂಗ್  ಮಾಡಿದ್ದಕ್ಕಾಗಿ 9 ಮಂದಿ ವಿದ್ಯಾರ್ಥಿಗಳನ್ನು ಮಂಗಳೂರು ನಗರ ಪೊಲೀಸರು ಶುಕ್ರವಾರಬಂಧಿಸಿದ ಘಟನೆ ನಡೆದಿದೆ. ಬಂಧಿತರ ಮೇಲೆ ಕರ್ನಾಟಕ ಶಿಕ್ಷಣ ಕಾಯ್ದೆ ಮತ್ತು ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಂಗಳೂರಿನ ಖಾಸಗಿ ಕಾಲೇಜೊಂದರ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಸಾಯಿನಾಥ್ (22), ಅಶ್ವಥ್ (20), ಜಿಷ್ಣು (20), ಶ್ರೀಕಾಂತ್ (20), ರಾಜೀವ್ (21), ಮುಕ್ತಾರ್ ಅಲಿ (19), ಮಹಮ್ಮದ್ ರಝೀಮ್ (20), ರಾಹುಲ್ (21), ಜಿಷ್ಣು (20) ರಾಗಿಂಗ್ ನಡೆಸಿದ್ದರು.

 

ಶಿಕ್ಷಣ ಸಂಸ್ಥೆಗಳು ಇಂತಹ ಕಾನೂನು ಬಾಹಿರ ಚಟುವಟಿಕೆಗಳನ್ನು ಮಟ್ಟಹಾಕಬೇಕು. ರಾಗಿಂಗ್ ಗೆ ಪೂರ್ಣ ಪ್ರಮಾಣದಲ್ಲಿ ಕಡಿವಾಣ ಹಾಕಬೇಕು. ಇಂತಹ ಘಟನೆಗಳು ಮರುಕಳಿಸಬಾರದು, ಮತ್ತೆ   ನಡೆದರೆಕಠಿಣ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಮಂಗಳೂರು ನಗರ ಪೊಲೀಸ್ ಫೇಸ್‌ಬುಕ್‌ ಖಾತೆಯ ಮೂಲಕ ಸ್ಪಷ್ಟವಾಗಿ ಮಾಹಿತಿ ನೀಡಿದ್ದಾರೆ

 
 
 
 
 
 
 
 
 
 
 

Leave a Reply