ಮಂಗಳೂರಿನ 4 ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್‌ 144 ಜಾರಿ!!

ಮಂಗಳೂರಿನ ಸುರತ್ಕಲ್‌ ನ ಕಾಟಿಪಳ್ಳದಲ್ಲಿ ಅಂಗಡಿ ಮುಂದೆ ನಿಂತಿದ್ದ ವ್ಯಕ್ತಿಯೋರ್ವರ ಕೊಲೆಯ ಹಿನ್ನೆಲೆಯಲ್ಲಿ ಸುರತ್ಕಲ್‌, ಬಜಪೆ, ಕಾವೂರು ಮತ್ತು ಪಣಂಬೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್‌ 144 ಜಾರಿ ಮಾಡಲಾಗಿದೆ. ಈ ಬಗ್ಗೆ ಮಂಗಳೂರು ನಗರ ಕಮೀಷನರ್‌ ಆದೇಶ ಹೊರಡಿಸಿದ್ದಾರೆ. ಡಿಸೆಂಬರ್ 25ರ ಬೆಳಿಗ್ಗೆ 6ರಿಂದ ಡಿಸೆಂಬರ್ 27ರ ಬೆಳಿಗ್ಗೆ 6 ಗಂಟೆಯವರೆಗೆ ನಾಲ್ಕೂ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.

ಸುರತ್ಕಲ್, ಬಜಪೆ, ಕಾವೂರು, ಪಣಂಬೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ 25 ರ ಬೆಳಿಗ್ಗೆ 10 ಗಂಟೆಯಿಂದ 27 ರ ಬೆಳಿಗ್ಗೆ 10 ಗಂಟೆಯವರೆಗೆ ಮದ್ಯ ನಿಷೇಧ ಮಾಡಲಾಗಿದ್ದು, ಎಲ್ಲಾ ಮದ್ಯ ಮಾರಾಟ ಮಳಿಗೆಗಳು, ಬಾರ್ ಹಾಗೂ ವೈನ್ಸ್ ಗಳು ಎರಡು ದಿನಗಳ ಕಾಲ ಬಂದ್‌ ಆಗಲಿದೆ.

ರಾತ್ರಿ ವೇಳೆ ಸಂಚರಿಸುವ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುವ ಸಾಧ್ಯತೆ ಇರುವ ಕಾರಣ ಮುಂಜಾಗ್ರತಾ ಕ್ರಮವಾಗಿ ದಿ.25-12-2022 ಮತ್ತು ದಿನಾಂಕ 26-12-2022 ಮಂಗಳೂರು ನಗರ ಪೊಲೀಸ್‌ ಕಮೀಷನರೇಟ್‌ನ ಸುರತ್ಕಲ್, ಬಜಪೆ, ಕಾವೂರು ಹಾಗೂ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇರುವ ಎಲ್ಲಾ ಕೈಗಾರಿಕೆ ಹಾಗೂ ವಾಣಿಜ್ಯ ಸಂಕೀರ್ಣಗಳಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗಳ ಕರ್ತವ್ಯದ ಪಾಳಿಯನ್ನು ಸಂಜೆ 6-00 ಗಂಟೆಯ ಒಳಗಾಗಿ ಬದಲಾಯಿಸುವಂತೆ ಹಾಗೂ ಸಂಜೆ 6-00 ಗಂಟೆಯಿಂದ ಬೆಳಿಗ್ಗೆ 6-00 ಗಂಟೆಯವರೆಗೆ ಸಿಬ್ಬಂದಿಯವರು ರಸ್ತೆಗಳಲ್ಲಿ ಸಂಚರಿಸದಂತೆ ಸಂಸ್ಥೆಯ ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದೆ.

 
 
 
 
 
 
 
 
 
 
 

Leave a Reply