ಜು. 1ರಿಂದ ದ.ಕ. ಜಿಲ್ಲೆಯಲ್ಲಿ ಖಾಸಗಿ ಬಸ್ ಸಂಚಾರ ಆರಂಭ

ಮಂಗಳೂರು: ಜು. 1ರಿಂದ ಸಿಟಿ ಮತ್ತು ಸರ್ವಿಸ್ ಬಸ ಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚಾರ ಆರಂಭಿಸಲಿವೆ ಎಂದು ಕೆನರಾ ಬಸ್ ಮಾಲಕರ ಅಸೋಸಿಯೇಶನ್ ಅಧ್ಯಕ್ಷ ರಾಜವರ್ಮ ಬಲ್ಲಾಳ್ ಮತ್ತು ದ.ಕ. ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್ ರಾಜ್ ಆಳ್ವ ತಿಳಿಸಿದ್ದಾರೆ.

ಬಸ್ ಚಾಲಕರು, ನಿರ್ವಾಹಕರು ಈಗಾಗಲೇ ಕೆಲಸವಿಲ್ಲದೆ ಕಂಗಾಲಾಗಿದ್ದು, ಮಾಲಕರೂ ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದಾರೆ.ಹೀಗಾಗಿ ಬಸ್ ಸಂಚಾರ ಆರಂಭಿಸುವುದು ಅನಿವಾರ್ಯವಾಗಿದೆ. ಈ ಬಗ್ಗೆ ವಿಸ್ತೃತ ಚರ್ಚೆ ನಡೆಸಲಾಗಿದೆ ಎಂದು ರಾಜವರ್ಮ ಬಲ್ಲಾಳ್ ತಿಳಿಸಿದ್ದಾರೆ.ಜು. 1ರಂದು ಜಿಲ್ಲೆಯ ಪರಿಸ್ಥಿತಿ ಅವಲೋಕಿಸಿ ಸಿಟಿ ಬಸ್ ಸಂಚಾರ ಆರಂಭಿಸುವುದಾಗಿ ದಿಲ್ ರಾಜ್ ಆಳ್ವ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply