ಮಂಗಳೂರು : ಇಂದು ದ.ಕ. ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೊರೋನಾ ಪಾಸಿಟಿವಿಟಿ ದರದಲ್ಲಿ ಇಳಿಕೆಯಾಗುತ್ತಿರುವ ಹಿನ್ನೆಲೆ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ. ಇಂದು ಜು. 2ರ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ಜಿಲ್ಲೆ ಅನ್ ಲಾಕ್ ಆಗಲಿದೆ.

ಕಳೆದ ಎರಡು ತಿಂಗಳಿಂದ ಲಾಕ್ ಡೌನ್ ನಿಂದ ತತ್ತರಿಸಿದ್ದ ಜಿಲ್ಲೆಯ ಜನತೆ ಇದೀಗ ಲಾಕ್ ಡೌನ್ ಸಡಿಲಿಕೆಯಾಗಿರುವುದರಿಂದ ಸಂತಸಗೊಂಡಿದ್ದಾರೆ. ಬೆಳಗ್ಗೆ 7ರಿಂದ ಸಂಜೆ 5ರ ವರೆಗೆ ಎಲ್ಲಾ ವ್ಯಾಪಾರ ವಹಿವಾಟುಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ. ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply