ಡಿಸೆಂಬರ್ 29, 30 ಮಂತ್ರಾಲಯ ಶ್ರೀಗಳ ಉಡುಪಿ ಮೊಕ್ಕಾಂ

ಮಂತ್ರಾಲಯ ಶ್ರೀ ರಾಘವೇಂದ್ರ ಗುರು ಸಾರ್ವಭೌಮರ ಪೀಠಾಧೀಶರಾದ ಶ್ರೀ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದರು ಎರಡು ದಿನಗಳ ಕಾಲ ಉಡುಪಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಡಿಸೆಂಬರ್ 29 ರಂದು ಉಡುಪಿಯ ರಥಭೀದಿಯಲ್ಲಿರುವ ಶ್ರೀ ರಾಘವೇಂದ್ರ ಮಠದಲ್ಲಿ ಬೆಳಿಗ್ಗೆ 6 ಗಂಟೆಯಿಂದ ಪಟ್ಟದ ದೇವರ ಪೂಜೆ ನಡೆಸಲಿದ್ದಾರೆ. 

ಡಿಸೆಂಬರ್ 30ರಂದು ಉಡುಪಿ ಪರ್ಯಾಯ ಶ್ರೀ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರ ಪರ್ಯಾಯ ಸಂದರ್ಭದಲ್ಲಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದು, ಕ್ಷೇತ್ರದಲ್ಲಿ ಸಂಸ್ಥಾನ ಪೂಜೆ ನೆರವೇರಿಸಲಿದ್ದಾರೆ ಎಂದು ಉಡುಪಿ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪ್ರಕಟಣೆ ತಿಳಿಸಿದೆ.

 
 
 
 
 
 
 
 
 
 
 

Leave a Reply