ಮೀನುಗಾರರಿಗೆ ಉಚಿತ ಕೋವಿಡ್ ಲಸಿಕಾ ಕಾರ್ಯಕ್ರಮ – ಶಾಸಕ ರಘುಪತಿ ಭಟ್ ಚಾಲನೆ

ಮಲ್ಪೆ : ಮೀನುಗಾರರ ಸಂಘ (ರಿ.) ಮಲ್ಪೆ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ, ಉಡುಪಿ ಇವರ ಸಹಯೋಗದೊಂದಿಗೆ ಮಲ್ಪೆ ಮೀನುಗಾರರ ಸಂಘದಲ್ಲಿ ಇಂದು ಹಮ್ಮಿಕೊಳ್ಳಲಾದ “ಮೀನುಗಾರರಿಗೆ ಉಚಿತ ಕೋವಿಡ್ ಲಸಿಕಾ ಕಾರ್ಯಕ್ರಮ”ದಲ್ಲಿ ಶಾಸಕ ಕೆ. ರಘುಪತಿ ಭಟ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಸುವರ್ಣ, ಕಾರ್ಯದರ್ಶಿ ರತ್ನಾಕರ ಸಾಲ್ಯಾನ್, ಉಡುಪಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ನಾಗಭೂಷಣ್ ಉಡುಪ, ತಾಲೂಕು ಆರೋಗ್ಯಾಧಿಕಾರಿ ವಾಸುದೇವ ಉಪಾಧ್ಯಾಯ, ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಕೆ. ಗಣೇಶ್ ಮತ್ತು ಮಲ್ಪೆ ಮೀನುಗಾರರ ಸಂಘದ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply