ಭಾರತ ಮಾತೆಯ ಸೇವೆಗೆ ಸನ್ನದ್ಧರಾಗಿರುವ ಯೋಧರಿಗೆ ಅಭಿನಂದನಾ ಕಾರ್ಯಕ್ರಮ

ಕೋಟಿ ಚೆನ್ನಯ್ಯ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆ ಹನೆಹಳ್ಳಿಯಲ್ಲಿ ಭಾರತ ಮಾತೆಯ ಸೇವೆಗೆ ಸನ್ನದ್ಧರಾಗಿರುವ 30 ಕ್ಕೂ ಹೆಚ್ಹು ಯೋಧರಿಗೆ ಅಭಿನಂದನಾ ಕಾರ್ಯಕ್ರಮವು ವಿಜೃಂಭಣೆಯಿಂದ ಸಂಪನ್ನಗೊಂಡಿತು.

ಬ್ರಹ್ಮಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಾವಿ ಯೋಧರ ಮೆರವಣಿಗೆಯ ಜಾಥಾಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಚಾಲನೆ ನೀಡಿದರು, ಮೆರವಣಿಗೆಯು ಹನೆಹಳ್ಳಿ ಕೋಟಿ ಚೆನ್ನಯ್ಯ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆಯವರೆಗೆ ಸಾಗಿ ಬಂತು, ದಾರಿಯುದ್ದಕ್ಕೂ ಊರಿನ ಹಿರಿಯರು ಭಾವಿ ಯೋಧರಿಗೆ ಹೂಮಳೆ ಸುರಿದರು.

ಶಾಲಾ ವೇದಿಕೆಯಲ್ಲಿ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದ ಉದ್ಘಾಟನೆಯನ್ನು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಅವರು ನೆರವೇರಿಸಿ ಭಾವಿ ಯೋಧರನ್ನು ಶುಭ ಹಾರೈಸಿದರು. 

ಭೂಸೇನೆ, ವಾಯುಸೇನೆ ಮತ್ತು ನೌಕಾಸೇನೆಗೆ ಆಯ್ಕೆಯಾದ ಯೋಧರನ್ನು ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂಧರ್ಬದಲ್ಲಿ ಜಿಲ್ಲಾ ಪಂಚಾಯತ್ ನ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್. ಟಿ. ಸಿದ್ದಲಿಂಗಪ್ಪ, ಬ್ರಹ್ಮಾವರ ತಹಸೀಲ್ದಾರ್ ಶ್ರೀಕಾಂತ್ ಎಸ್. ಹೆಗಡೆ,ಹನೆಹಳ್ಳಿ ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಮಲ್ಲಿಕಾ ಪೂಜಾರ್ತಿ,ಕೇಂದ್ರ ಸಮಿತಿ ಭಾರತ ಸೇವಾದಳದ ಆರೂರು ತಿಮ್ಮಪ್ಪ ಶೆಟ್ಟಿ, ವಿದ್ಯಾವರ್ಧಕ ಸಂಘ ಬಾರ್ಕೂರು ಇದರ ಗೌರವಾಧ್ಯಕ್ಷರಾದ ಶಾಂತರಾಮ್ ಶೆಟ್ಟಿ ಉಪಸ್ಥಿತರಿದ್ದರು.

ಹಿಂದುಳಿದ ವರ್ಗಗಳ ಇಲಾಖೆಯ ಉಡುಪಿ ಜಿಲ್ಲಾ ಅಧಿಕಾರಿ ಹಾಕಪ್ಪ ಆರ್ ಲಮಾಣಿ ಪ್ರಾಸ್ತಾವಿಕವಾಗಿ ಮಾತನಾಡಿದರು, ಸುಬೇದಾರ್ ಜನಾರ್ದನ್ ಕೆ ಸ್ವಾಗತಿಸಿ, ವಂದಿಸಿದರು.

 
 
 
 
 
 
 
 
 
 
 

Leave a Reply