ಉಡುಪಿ : ಮಕ್ಕಳೊಂದಿಗೆ ತಾಯಿ ನಾಪತ್ತೆ

ಉಡುಪಿ ತಾಲೂಕು ಪುತ್ತೂರು ಗ್ರಾಮದ ಕೊಡಂಕೂರು ನಿವಾಸಿ ಅಕ್ಷತಾ (25) ಎಂಬ ಮಹಿಳೆಯು ತನ್ನ ಇಬ್ಬರು ಹೆಣ್ಣು ಮಕ್ಕಳಾದ ವಿದ್ಯಾಶ್ರೀ (7) ಹಾಗೂ ಮಲ್ಲು (4) ವಿನೊಂದಿಗೆ ಅಕ್ಟೋಬರ್ 6 ರಂದು ಬೆಳಗ್ಗೆ 8 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
ಅಕ್ಷತಾ 5 ಅಡಿ ಎತ್ತರ, ಸಾಧಾರಣ ಶರೀರ, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ಹಿಂದಿ, ತೆಲುಗು ಹಾಗೂ ತಮಿಳು ಭಾಷೆ ಮಾತನಾಡುತ್ತಾರೆ. ವಿದ್ಯಾಶ್ರೀ 3 ಅಡಿ 6 ಇಂಚು ಎತ್ತರ, ಸಪೂರ ಶರೀರ, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ
ಭಾಷೆ ಮಾತನಾಡುತ್ತಾರೆ. ಮಲ್ಲು 3 ಅಡಿ ಎತ್ತರ, ಸಾಧಾರಣ ಶರೀರ, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
 
 
 
 
 
 
 
 
 
 
 

Leave a Reply