ಉಡುಪಿ : ವ್ಯಕ್ತಿ ನಾಪತ್ತೆ

ಉಡುಪಿ : ಹಿರಿಯಡ್ಕ ನಿವಾಸಿ ರವೀಂದ್ರ ಶೆಟ್ಟಿ (55) ಎಂಬ ವ್ಯಕ್ತಿಯು ಅಕ್ಟೋಬರ್ 14 ರಂದು ರಾತ್ರಿ 10.30 ರ ಸುಮಾರಿಗೆ ಮನೆಯಿಂದ ಬೆಂಗಳೂರಿಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 8 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು, ಹಿಂದಿ, ಇಂಗ್ಲೀಷ್ ಹಾಗೂ ತಮಿಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರನ್ನು
ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
 
 
 
 
 
 
 
 
 
 
 

Leave a Reply