ಉಡುಪಿ: ಮಹಿಳೆ ನಾಪತ್ತೆ

ಉಡುಪಿ ತಾಲೂಕು ತೆಂಕನಿಡಿಯೂರು ಗ್ರಾಮದ ತೊಟ್ಟಂ ನಿವಾಸಿ ರೂಪಾ (26 ವರ್ಷ) ಎಂಬ ಮಹಿಳೆಯು ನವೆಂಬರ್ 13 ರಂದು ಬೆಳಗ್ಗೆ 6.30 ರ ಸುಮಾರಿಗೆ ಕೆಲಸಕ್ಕೆಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 1 ಇಂಚು ಎತ್ತರ, ಗೋಧಿ ಮೈ ಬಣ್ಣ, ಸಾಧಾರಣ ಮೈ ಕಟ್ಟು ಹೊಂದಿದ್ದು, ಕನ್ನಡ, ಹಿಂದಿ, ನೇಪಾಳಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆ ದೂ.ಸಂಖ್ಯೆ: 0820-2537999, ಮೊ.ನಂ.: 9480805447, ಉಡುಪಿ ವೃತ್ತ ನಿರೀಕ್ಷಕರ ಕಚೇರಿ ಮೊ.ನಂ: 9480805430 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply