ಮಂಗಳೂರು: ಪಸ್ತುತ ಮಳೆಗಾಲವಾದ್ದರಿಂದ ಮೆಸ್ಕಾಂಗೆ ಸಮಸ್ಯೆಗಳು ಎದುರಾಗುವುದು ಸಾಮಾನ್ಯ. ಅದನ್ನು ಎದುರಿಸಲು ಸಿದ್ಧರಾಗಿರಬೇಕು. ಜನತೆಯ ಸಮಸ್ಯೆಗೆ 24 ಗಂಟೆಯೊಳಗೆ ಹೊಸ ಟಿಸಿ ಅಳವಡಿಸಬೇಕು. ಈ ಕಾರಣಕ್ಕಾಗಿ ಮೆಸ್ಕಾಂ ವ್ಯಾಪ್ತಿಯ ಎಲ್ಲಾ ಉಪ ವಿಭಾಗಗಳಲ್ಲಿ ಟಿಸಿ ಬ್ಯಾಂಕ್ ಅಳವಡಿಸಬೇಕು ಎಂದು ಪ್ರಾಣಾ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ವಿ.ಸುನೀಲ್ ಕುಮಾರ್ ಹೇಳಿದರು.
ಮೆಸ್ಕಾಂ ಇಲಾಖೆಗೆ ಸಂಬಂಧಿಸಿ ಸೋಮವಾರ ಮಂಗಳೂರಿನ ಪ್ರಧಾನ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಾರ್ವಜನಿಕರ ದೂರುಗಳಿಗೆ ಸಕಾಲಿಕವಾಗಿ ಸ್ಪಂದಿಸುವ ಮೂಲಕ ಅದಷ್ಟು ಶೀಘ್ರ ಸಮಸ್ಯೆ ಪರಿಹಾರಕ್ಕೆ ಒತ್ತು ನೀಡಬೇಕು. ಯಾವುದೇ ಕಾರಣಕ್ಕೂ ವಿಳಂಬ ಸಲ್ಲದು ಎಂದು ಮೆಸ್ಕಾಂ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
ಇಲೆಕ್ಟಿಕ್ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದೆ. ನಗರದ ವಿವಿಧ ಭಾಗಗಳಲ್ಲಿ ಮೆಸ್ಕಾಂ ವತಿಯಿಂದ ಅಲೆಕ್ಟಿಕ್ ರೀಚಾರ್ಜ್ ಸೆಂಟರ್ ಆರಂಭಿಸಬೇಕು. ಇದರಿಂದ ಹೆಚ್ಚಿನ ಮಂದಿಗೆ ಅನುಕೂಲವಾಗಲಿದೆ ಎಂದರು.
ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ಕುಮಾರ್ ಮಿಶ್ರಾ, ತಾಂತ್ರಿಕ ವಿಭಾಗದ ನಿರ್ದೇಶಕ ಪದ್ಮಾವತಿ, ಮೆಸ್ಕಾಂ ನಿರ್ದೇಶಕ ಕಿಶೋರ್ ಕುಮಾರ್ ಉಪಪ್ಥಿತರಿದ್ದರು.