ಜ್ಯುವೆಲರಿ ಶಾಪ್ ಉದ್ಘಾಟನೆಯ ತಯಾರಿಯಲಿದ್ದ ಯುವಕ ಶವವಾಗಿ ಪತ್ತೆ!

ತನ್ನದೇ ಜ್ಯುವೆಲರಿ ಶಾಪ್ ಉದ್ಘಾಟನೆಯ ತಯಾರಿಯಲಿದ್ದ ಯುವಕನೋರ್ವನ ಮೃತದೇಹ ಜೂ. 22ರ ಗುರುವಾರ ಅಪಘಾತದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿದೆ.

ಕಡಬ ನಿವಾಸಿಯಾದ ದಯಾನಂದ ಆಚಾರ್ಯ ಅವರ ಪುತ್ರ ನಾಗಪ್ರಸಾದ್ ಮೃತಪಟ್ಟ ಯುವಕನಾಗಿದ್ದು, ಮರ್ಧಾಳದ ಮಸೀದಿ ಬಿಲ್ಡಿಂಗ್ ನಲ್ಲಿ ಇಂದು (ಜೂನ್ 22) ಐಶ್ವರ್ಯ ಗೋಲ್ಡ್ ಹೆಸರಿನ ಚಿನ್ನದಂಗಡಿ ಶುಭಾರಂಭಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಪೂರ್ವ ತಯಾರಿ ನಡೆಯುತ್ತಿತ್ತು. ಆದರೆ ಇಂದು ಬೆಳಿಗ್ಗೆ ಸಕಲೇಶಪುರ ಠಾಣಾ ವ್ಯಾಪ್ತಿಯ ಗುಂಡ್ಯ ಕೆಂಪುಹೊಳೆ ಸಮೀಪದ ಅಪಘಾತದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದೆ.

ಈ ಘಟನೆಯ ಬಗ್ಗೆ ಸಾರ್ವಜನಿಕರು ಅನುಮಾನ ವ್ಯಕ್ತಪಡಿಸಿದ್ದು, ಈ ಪ್ರಕರಣದ ತನಿಖೆಯ ಬಳಿಕವಷ್ಟೇ ನೈಜ ಕಾರಣ ತಿಳಿಯಬೇಕಾಗಿದೆ.

 
 
 
 
 
 
 
 
 
 
 

Leave a Reply