ನಾಲ್ಕೂರು ಗ್ರಾಮದ ಹಡಿಲು ಭೂಮಿ ಕೃಷಿಗೆ ಚಾಲನೆ

ನಾಲ್ಕೂರು: ಗ್ರಾಮೀಣ ಭಾಗಗಳಲ್ಲಿ ಕಾಡು ಪ್ರಾಣಿಗಳ ಉಪಟಳದಿಂದಾಗಿ ಕೃಷಿ ಬೆಳೆಗಳಿಗೆ ಹಾನಿಯಾಗುವುದರಿಂದ ಅದನ್ನು ತಡೆಯಲು ಸಾಧ್ಯವಾಗದೆ ರೈತರು ನಷ್ಟ ಅನುಭವಿಸುವುದರಿಂದ ಹೆಚ್ಚಿನ ಮಂದಿ ಕೃಷಿ ಭೂಮಿಯನ್ನು ಹಡಿಲು ಬಿಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಕಾಡುಪ್ರಾಣಿಗಳ ಉಪಟಳವನ್ನು ನಿಯಂತ್ರಿಸಲು ಅರಣ್ಯ ಇಲಾಖೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಶಾಸಕ ರಘುಪತಿ ಭಟ್ ಅರಣ್ಯ ಸಚಿವರಲ್ಲಿ ಮನವಿ ಮಾಡಿದರು.

ಹಡಿಲು ಭೂಮಿ ಕೃಷಿ ಅಂದೋಲನ”ದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ನಾಲ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 20 ಎಕರೆ ಹಡಿಲು ಭೂಮಿಯನ್ನು ಸಾವಯವ ಕೃಷಿ ಮಾಡಲಾಗುತ್ತಿದ್ದು, ಇಂದು ಮಾರಾಳಿ ಹೊಸಮನೆ ಬೈಲಿನಲ್ಲಿ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.

ನಾಟಿ ಕಾರ್ಯದಲ್ಲಿ ಪಾಲ್ಗೊಂಡ ಮಾನ್ಯ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಶಾಸಕ ರಘುಪತಿ ಭಟ್ ಮನವಿಗೆ ಸ್ಪಂದಿಸಿ ತಕ್ಷಣದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಈ ಸಂಬಂಧ ಸಭೆ ನಡೆಸಿ ಚರ್ಚಿಸಿ ಕಾಡುಪ್ರಾಣಿಗಳ ನಿಯಂತ್ರಣಕ್ಕೆ ಪರಿಣಾಮಕಾರಿ ಯೋಜನೆ ರೂಪಿಸುವುದಾಗಿ ಹೇಳಿದರು. ಹಾಗೂ ಶಾಸಕರ ಈ ಮಹತ್ತರ ಕಾರ್ಯವಾದ ಹಡಿಲು ಭೂಮಿ ಕೃಷಿ ಯೋಜನೆಯನ್ನು ಶ್ಲಾಘಿಸಿದರು.

ಶಿವಸುಜ್ಞಾನ ತೀರ್ಥ ಮಹಾಸ್ವಾಮಿಗಳು ವಿಶ್ವಕರ್ಮ ಜಗದ್ಗುರು ಪೀಠ ಅರೆಮಾದನಹಳ್ಳಿ, ಅರವಿಂದ ಲಿಂಬಾವಳಿ ಮಾನ್ಯ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವರು, ಸಂತೋಷ್ ಹೆಗ್ಡೆ ಮಾಜಿ ಅಧ್ಯಕ್ಷರು ನಾಲ್ಕೂರು ಗ್ರಾಮ ಪಂಚಾಯತ್, ಕಾಶಿನಾಥ್ ಶಣೈ ಮಾಲಕರು ಸುಪ್ರೀತಾ ಕ್ಯಾಶ್ಯೂಸ್ ರೊಂದಿಗೆ ಶಾಸಕ ಕೆ. ರಘುಪತಿ ಭಟ್ ಭೂ ಮಾತೆಗೆ ಹಾಲನ್ನು ಅರ್ಪಿಸಿ ನೇಜಿ ನೀಡುವ ಮೂಲಕ ಯಂತ್ರ ಹಾಗೂ ಕೈ ನಾಟಿಗೆ ಚಾಲನೆ ನೀಡಿ ಸ್ಥಳೀಯರೊಂದಿಗೆ ಸೇರಿ ನೇಜಿ ನೆಟ್ಟರು.

ನಾಲ್ಕೂರು ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಕಾಶ್ ನಾಯ್ಕ್, ಉಪಾಧ್ಯಕ್ಷ ಸುಮಿತ್ರಾ ಶರತ್ ಶೆಟ್ಟಿ, ಕೇದಾರೋತ್ಥಾನ ಟ್ರಸ್ಟ್ ನ ಕೋಶಾಧಿಕಾರಿ ರಾಘವೇಂದ್ರ ಕಿಣಿ, ಸದಸ್ಯ ಪ್ರತಾಪ್ ಹೆಗ್ಡೆ ಮಾರಾಳಿ, ಮಿಲ್ಲೋ ಟ್ಯಾಗೋ (IFS), Apccf ಮಂಗಳೂರು ವೃತ್ತದ ನೋಡಲ್ ಅಧಿಕಾರಿ, ಪ್ರಕಾಶ ಎಸ್ ನೆಟಾಲ್ಕರ್,ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಗಳೂರು ವೃತ್ತ, ಆಶಿಶ್ ರೆಡ್ಡಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಕುಂದಾಪುರ ವಿಭಾಗ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಕೆಂಪೇಗೌಡ, ಉಡುಪಿ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಮೋಹನ್ ರಾಜ್, ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ಹಿರಿಯ ಕ್ಷೇತ್ರ ಅಧಿಕಾರಿ ಶಂಕರ್, ನಾಲ್ಕೂರು ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯ ಸಂಘ ಸಂಸ್ಥೆಯ ಸದಸ್ಯರು, ಕೃಷಿಕರು, ಪ್ರಮುಖರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply