ನಿಟ್ಟೂರು ಪ್ರೌಢಶಾಲೆಯಲ್ಲಿ ೭೭ನೇ ಸ್ವಾತಂತ್ರ ದಿನಾಚರಣೆ

ಉಡುಪಿ : ಶಾಲೆಯಲ್ಲಿ ೭೭ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು. ನಿಟ್ಟೂರು ಪ್ರೌಢಶಾಲೆಯ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀ ಯೋಗೀಶ್ಚಂದ್ರಾಧರ್ ಧ್ವಜಾರೋಹಣ ನೇರವೇರಿಸಿ, ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಅಭ್ಯಾಗತರಾಗಿ ಆಗಮಿಸಿದ ಶ್ರೀ ಪ್ರಕಾಶ್, ನಿವೃತ್ತ ಬಿ.ಎಸ್.ಎನ್.ಎಲ್. ಉದ್ಯೋಗಿ ಮಾತನಾಡುತ್ತಾ ಸ್ವಾತಂತ್ರ÷್ಯಕ್ಕಾಗಿ ಬಲಿದಾನಗೈದ ಮಹಾನ್ ದೇಶಭಕ್ತರ ಜೀವನಗಾಥೆಗಳನ್ನು ಅನಾವರಣಗೊಳಿಸುತ್ತಾ ವಿದ್ಯಾರ್ಥಿಗಳು ಶಿಸ್ತುಬದ್ಧ ಜೀವನದೊಂದಿಗೆ ಸದಾ ಕರ್ತವ್ಯ ಪ್ರಜ್ಞೆಯಿಂದ ಬದುಕುವುದೇ ದೇಶಕ್ಕೆ ನೀಡುವ ಅಮೂಲ್ಯ ಕೊಡುಗೆಯಾಗಿದೆ ಎನ್ನುತ್ತಾ, ವಿದ್ಯಾರ್ಥಿಗಳಲ್ಲಿ ರಾಷ್ಟçಪ್ರೇಮದ ಜಾಗೃತಿ ಮೂಡಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಅನಸೂಯ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಕಮಲಾಕ್ಷ ಶೇಟ್ ಮತ್ತು ಸದಸ್ಯರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಮೇಘಾ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೇರವೇರಿದವು.

 
 
 
 
 
 
 
 
 
 
 

Leave a Reply