ಪಡುಬಿದ್ರೆ ಠಾಣೆಯಲ್ಲಿಯೇ ಪಾರ್ಟಿ- ಎಸ್ಸೈ ಸಹಿತ 10 ಸಿಬ್ಬಂದಿಗೆ ಕೊರೊನಾ ಧೃಡ

ಪಡುಬಿದ್ರೆ: ಪೊಲೀಸ್ ಠಾಣೆಯ ಔತಣ ಕೂಟದಲ್ಲಿ ಭಾಗವಹಿಸಿದ ಎಸ್ಸೈ ಸಹಿತ ಠಾಣೆಯ 10 ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಕೊರೋನಾ ಸೋಂಕು ದೃಢಪಟ್ಟ ಎಲ್ಲಾ ಪೊಲೀಸ್ ಅಧಿಕಾರಿ ಹಾಗೂ ‌ಸಿಬ್ಬಂದಿಗಳು ಕ್ವಾರಂಟೈನಲ್ಲಿದ್ದಾರೆ. ಪೊಲೀಸ್ ಠಾಣೆಯನ್ನು ಪಡುಬಿದ್ರಿ ಬೋರ್ಡ್ ಶಾಲೆಗೆ ಸ್ಥಳಾಂತರಿಸಲಾಗಿದೆ.ಅಲ್ಲದೆ ಪಡುಬಿದ್ರಿ ಪೊಲೀಸ್ ಠಾಣೆಯನ್ನು 24 ಗಂಟೆಗಳ ಕಾಲ ಸೀಲ್ಡೌನ್ ಮಾಡಲಾಗಿದೆ.

ಕೆಲವು ದಿನಗಳ ಹಿಂದೆ ಪೋಲಿಸ್ ಠಾಣೆಯಲ್ಲಿ ಸಿಬ್ಬಂದಿಯೊಬ್ಬರ ಹುಟ್ಟು ಹಬ್ಬದ ಪ್ರಯುಕ್ತ ಔತಣ ಕೂಟ ಏರ್ಪಡಿಸಲಾಗಿತ್ತು. ಆ ಸಮಾರಂಭ ನಡೆದ ವಾರದೊಳಗೆ ಒಬ್ಬರಿಗೆ ಜ್ವರ ಬಂದ ಹಿನ್ನೆಲೆ ಕೊವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ವರದಿ ಪಾಸಿಟಿವ್ ಬಂದ ಬಳಿಕ ಠಾಣೆಯ ಎಲ್ಲರಿಗೂ ಕೊವಿಡ್ ಪರೀಕ್ಷೆ ನಡೆಸಲಾಗಿದ್ದು,ಈ ವೇಳೆ ಎಸ್ಸೈ ಸಹಿತ 10 ಪೊಲೀಸರಿಗೆ ಕೊರೋನಾ ದೃಢಪಟ್ಟಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ನಡೆಯುತ್ತಿದ್ದು, ಪಡುಬಿದ್ರಿ ಪೊಲೀಸ್ ಠಾಣಾ ಎಸೈ ದಿಲೀಪ್ ರವರ ತೀವ್ರ ನಿರ್ಲಕ್ಷತನವೇ ಇದಕ್ಕೆ ಕಾರಣ. ಈ ಬಗ್ಗೆ ಉನ್ನತ ಅಧಿಕಾರಿಗಳು ಯಾವ ಕ್ರಮಕೈಗೊಳ್ಳಬಹುದು ಎಂಬ ಅಭಿಪ್ರಾಯಗಳು ಕೇಳಿಬಂದಿವೆ.

 
 
 
 
 
 
 
 
 
 
 

Leave a Reply