Janardhan Kodavoor/ Team KaravaliXpress
31.6 C
Udupi
Saturday, December 3, 2022
Sathyanatha Stores Brahmavara

ಉಡುಪಿಯಲ್ಲಿ ಪಂಜರ ಮೀನು ಕೃಷಿ ಕಾರ್ಯಗಾರ:ಯಶ್‌ಪಾಲ್ ಸುವರ್ಣ.    

 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಆತ್ಮನಿರ್ಭರ ಭಾರತ ಪರಿಕಲ್ಪನೆಗೆ ಪೂರಕವಾಗಿ, ಕರ್ನಾಟಕ ಸರಕಾರದ ಮೀನುಗಾರಿಕೆ ಇಲಾಖೆ ವತಿಯಿಂದ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರ ವಿಶೇಷ ಮುತುವರ್ಜಿಯಿಂದ ಪಂಜರ ಮೀನು ಕೃಷಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕಾರ್ಯಗಾರವನ್ನು ಸೆಪ್ಟೆಂಬರ್ ​8, ಮಂಗಳವಾರ ಬೆಳಿಗ್ಗೆ ​9 ಗಂಟೆಗೆ ಉಡುಪಿ ಪುರಭವನದಲ್ಲಿ ಆಯೋಜಿ ಸಲಾಗಿದೆ ಎಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಯಶ್‌ಪಾಲ್ ಸುವರ್ಣ ತಿಳಿಸಿದ್ದಾರೆ. 
ಈ ಕಾರ್ಯಗಾರವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಉದ್ಘಾಟಿಸಲಿದ್ದು, ಶಾಸಕರಾದ ಶ್ರೀ ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.ಮಾನ್ಯ ಸಚಿವರು ಕರಾವಳಿ ಜಿಲ್ಲೆಗಳಲ್ಲಿ ಪಂಜರ ಮೀನು ಕೃಷಿಗೆ ವಿಶೇಷ ಒತ್ತು ನೀಡುವ ಮೂಲಕ, ರಾಜ್ಯದಾದ್ಯಂದ ೧೦ ಸಾವಿರ ಮಂದಿಗೆ ಸ್ವ ಉದ್ಯೋಗ ನೀಡುವ ಉದ್ದೇಶಹೊಂದಿದ್ದು, ಪೂರಕವಾಗಿ ಉಡುಪಿಯಲ್ಲಿ ಈ ಕಾರ್ಯಗಾರವನ್ನು ಆಯೋಜಿಸಲಾಗಿಸಲಾಗಿದೆ.        
ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳು ಪಂಜರ ಮೀನು ಕೃಷಿ ಹಾಗೂ ಈ ಬಗ್ಗೆ ಮೀನುಗಾರಿಕೆ ಇಲಾಖೆಯ ಯೋಜನೆಗಳ ಬಗ್ಗೆ ವಿಸ್ತೃತ ಮಾಹಿತಿ ನೀಡಲಿದ್ದು, ಕಾರ್ಯಗಾರದಲ್ಲಿ ಭಾಗವಹಿಸಲಿಚ್ಚಿಸುವವರು ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ದಿವಾಕರ ಖಾರ್ವಿ (9844339919​) ಮತ್ತು ಪ್ರಥಮ ದರ್ಜೆ ಸಹಾಯಕರಾದ ಶ್ರೀ ರವಿ ಕುಮಾರ್ (​9741448143​) ಮಾಹಿತಿಯನ್ನು ಪಡೆಯ ಬಹುದು. ಉಡುಪಿ ಜಿಲ್ಲೆಯಲ್ಲಿ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪಂಜರು ಮೀನು ಕೃಷಿಯ ಮೂಲಕ ಸ್ವ ಉದ್ಯೋಗಿ ಗಳಾಗುವಂತೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  
- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!