ಪರ್ಕಳದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಔಷಧಿ ಮತ್ತು ವೈದ್ಯಕೀಯ ಪರಿಕರಗಳ ವಿತರಣೆ

ಪರ್ಕಳ: ಹಿರೇಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದ ಪರ್ಕಳ ಬಿ ಎಂ ಶಾಲೆಯ ಲಸಿಕಾ ಕೇಂದ್ರದಲ್ಲಿ ಶುಕ್ರವಾರ ಸರಳೆಬೆಟ್ಟು ನಿವಾಸಿ ಪುತ್ತಪ್ಪ ಸುಮಾರು 25,000 ರೂಪಾಯಿ ಮೌಲ್ಯದ ಔಷಧಿ,ಮಾಸ್ಕ್,ಸ್ಯಾನಿಟೈಸರ್ ಹಾಗು ಇತರ ಪರಿಕರಗಳನ್ನು ಪ್ರಾಥಮಿಕ ಅರೋಗ್ಯ ಕೇಂದ್ರದ ಅರೋಗ್ಯ ಸಹಾಯಕಿಯರು ಮತ್ತು ಆಶಾ ಕಾರ್ಯಕರ್ತೆಯರ ಮೂಲಕ ಹಸ್ತಾಂತರಿಸದರು. 

ನಗರಸಭೆಯ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಕರೋನಾ ಎರಡನೆಯ ಅಲೆಯ ಸಂಕಷ್ಟ ಪರಿಸ್ಥಿತಿಯಲ್ಲಿ ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರೋಗ್ಯ ಇಲಾಖೆಯ ವೈದ್ಯರುಗಳು, ಅರೋಗ್ಯ ಸಹಾಯಕಿಯರು ಮತ್ತು ಆಶಾ ಕಾರ್ಯಕರ್ತೆಯರ ಸುರಕ್ಷತೆಗಾಗಿ ಅವಶ್ಯಕ ಪರಿಕರಗಳನ್ನು ದಾನವಾಗಿ ನೀಡುತ್ತಿರುವ ಸಂಘ ಸಂಸ್ಥೆಗಳು ಮತ್ತು ದಾನಿಗಳಿಗೆ ಕೃತಜ್ಞತೆ ಸಲ್ಲಿಸಿದರು. 

ನಗರಸಭಾ ಸದಸ್ಯ ಮಂಜುನಾಥ್ ಮಣಿಪಾಲ, ವಿಜಯಲಕ್ಷ್ಮಿ, ಅಶ್ವಿನಿ ಅರುಣ್ ಪೂಜಾರಿ, ತಾಲೂಕು ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ಡಾ. ಸೋಫಿಯಾ, ಆರೋಗ್ಯ ಸಹಾಯಕಿಯರಾದ ಹರಿಣಾಕ್ಷಿ,ದಾವಲಬಿ ರುಸ್ತುಮ್, ಆಶಾ ಕಾರ್ಯಕರ್ತೆಯರು, ಸ್ಥಳೀಯ ಪ್ರಮುಖರಾದ ಸುಧೀರ್ ಶೆಟ್ಟಿಗಾರ್,ಪ್ರಶಾಂತ್ ಹಾಜರಿದ್ದರು.

 
 
 
 
 
 
 
 
 
 
 

Leave a Reply