ಉಡುಪಿಯಲ್ಲಿ ಪತ್ರಿಕಾ ದಿನಾಚರಣೆ ಪ್ರಯುಕ್ತ ಹಿರಿಯ ಪತ್ರಕರ್ತರಿಗೆ ಸನ್ಮಾನ

ಉಡುಪಿ: ಪತ್ರಿಕಾ ದಿನಾಚರಣೆಯ ಪ್ರಯುಕ್ತ ಹಿರಿಯ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ ಉಡುಪಿ ಶಾಖೆಯ ಸಹಯೋಗದೊಂದಿಗೆ ಗುರುವಾರ ಉಡುಪಿ ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಲಾಗಿತ್ತು.

ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ಸುಬ್ರಹ್ಮಣ್ಯ ಜಿ.ಕುರ್ಯ ಹಾಗೂ ಸುವರ್ಣ ಟಿವಿ ವರದಿಗಾರ ಶಶಿಧರ ಮಾಸ್ತಿಬೈಲುರನ್ನು ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ ಮುಖ್ಯಸ್ಥ ಹಫೀಝ್ ರೆಹಮಾನ್ ಸನ್ಮಾನಿಸಿದರು.

ವಕೀಲ ಹಾಗೂ ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ವಿವೇಕಾನಂದ ಪನಿಯಾಲ, ವಾರ್ತಾಧಿಕಾರಿ ಎಂ.ಮಂಜುನಾಥ್, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಮಲಬಾರ್ ಗೋಲ್ಡ್ ನ ಜಿ ಆರ್ ಎಂ ರಾಘವೇಂದ್ರ ನಾಯಕ್, ಚಾರೀಟಿ ಉಸ್ತುವಾರಿ ತಂಝೀಮ್ ಶಿರ್ವ ಮೊದಲಾದವರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply