ಉಡುಪಿ :ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಶಿಲಾನ್ಯಾಸ ನೆರವೇರಿಸುತ್ತಿದ್ದಂತೆ ಪಟ್ಟಾಭಿರಾಮನಾಗಿ ಭಕ್ತರಿಗೆ ದರ್ಶನ ನೀಡುತ್ತಿರುವ ಉಡುಪಿ ಶ್ರೀಕೃಷ್ಣ
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶ್ರೀರಾಮನ ಭವ್ಯ ಮಂದಿರಕ್ಕೆ ಶಿಲಾನ್ಯಾಸ ನೆರವೇರಿದೆ. ಈ ಮೂಲಕ ಭಕ್ತ ಕೋಟಿಯ ಕನಸು ನನಸಾಗಿದೆ. ಉತ್ತರ ಭಾರತದಲ್ಲಿ ಧಾರ್ಮಿಕ ವಿಧಿವಿಧಾನಗಳು ಶ್ರೀರಾಮನಿಗೆ ಅರ್ಪಣೆಯಾಗುತ್ತಿದ್ದಂತೆ ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಮಹಾಪೂಜೆಯನ್ನು ನೆರವೇರಿಸಲಾಯಿತು.
ಉಡುಪಿ ಶ್ರೀಕೃಷ್ಣ ಅಲಂಕಾರ ಪ್ರಿಯನಾಗಿದ್ದು, ಪ್ರತಿದಿನ ವಿವಿಧ ಅಲಂಕಾರಗಳನ್ನು ಮಾಡಲಾಗುತ್ತದೆ. ದಿನದ ವಿಶೇಷತೆ ತಕ್ಕ ಅಲಂಕಾರ ಇರುತ್ತದೆ. ರಾಮ ಮಂದಿರಕ್ಕೆ ಶಿಲಾನ್ಯಾಸ ನಿರ್ಮಾಣದ ಸಂದರ್ಭದಲ್ಲಿ ರಾಮನ ಪಟ್ಟಾಭಿಷೇಕ ನೆನಪಿಸುವ ಪಟ್ಟಾಭಿರಾಮ ಅಲಂಕಾರವನ್ನು ನೆರವೇರಿಸಲಾಯಿತು. ಕಾಣಿಯುರು ಮಠಾಧೀಶ ವಿದ್ಯಾವಲ್ಲಭ ತೀರ್ಥ ಶ್ರೀಪಾದರು “ಪಟ್ಟಾಭಿರಾಮ” ವಿಶೇಷ ಅಲಂಕಾರ ಮಾಡಿ ಶ್ರೀಕೃಷ್ಣನಲ್ಲಿ ಶ್ರೀರಾಮನನ್ನು ಕಂಡುಕೊಂಡರು ಬಿಲ್ಲು ಬಾಣವನ್ನು ಹಿಡಿದು, ಸಿಂಹಾಸನದಲ್ಲಿ ಕುಳಿತು ಪಟ್ಟಾಭಿಷೇಕದ ಸಂದರ್ಭವನ್ನು ಸ್ವಾಮೀಜಿಗಳು ನೆನಪಿಸಿದರು. ಪರ್ಯಾಯ ಅದಮಾರು ಮಠಾಧೀಶ ಈಶಪ್ರಿಯ ತೀರ್ಥ ಶ್ರೀಪಾದರು ಪಟ್ಟಾಭಿರಾಮನಿಗೆ ಮಹಾಪೂಜೆಯನ್ನು ನೆರವೇರಿಸಿದರು.