ಯಾವುದೇ ಕಾರಣಕ್ಕೂ ಸಿ.ಎಂ ಬದಲಾವಣೆ ಬೇಡ – ವಿಶ್ವಪ್ರಸನ್ನ ತೀರ್ಥರು

ಉಡುಪಿ : ರಾಜ್ಯದ ಪ್ರಸ್ತುತ ಪರಿಸ್ಥಿತಿಯಲ್ಲಿ ಸಿ.ಎಂ ಬದಲಾವಣೆ ಮಾಡಬಾರದು. ಮುಖ್ಯಮಂತ್ರಿ ಬದಲಾವಣೆಗೆ ಪರಿಸ್ಥಿತಿ ಈಗ ಅನುಕೂಲಕರವಾಗಿಲ್ಲ ಎಂದು ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು ಹೇಳಿದರು.

ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಯ ಕುರಿತಾಗಿ ಇದೀಗ ಭಾರೀ ಚರ್ಚ ನಡೆಯುತ್ತಿದ್ದು ವಿವಿಧ ಮಠಾಧೀಶರು ಬಿ. ಎಸ್. ಯಡಿಯೂರಪ್ಪ ಅವರ ಬೆಂಬಲಕ್ಕೆ ನಿಂತಿದ್ದಾರೆ. ಮುಖ್ಯಮಂತ್ರಿಗಳನ್ನು ಭೇಟಿ ಕೂಡ ಮಾಡುತ್ತಿದ್ದಾರೆ.ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಕೂಡ ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. 

ಮುಖ್ಯಮಂತ್ರಿ ಯಡಿಯೂರಪ್ಪರನ್ನು ಬೆಂಬಲಿಸಿದ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು,ರಾಜ್ಯದ ಈ ಪರಿಸ್ಥಿತಿಯಲ್ಲಿ ಸಿ.ಎಂ ಬದಲಾವಣೆಯನ್ನು ಮಾಡಬಾರದು ಎಂದರು. ಮುಖ್ಯಮಂತ್ರಿಗಳ ಬದಲಾವಣೆಗೆ ಈಗ ಪರಿಸ್ಥಿತಿಯು ಅನುಕೂಲಕರವಾಗಿಲ್ಲ. ನಾಯಕತ್ವ ಬದಲಾವಣೆ ಕೂಡಾ ಈಗ ಸೂಕ್ತವಲ್ಲ. ಇಷ್ಟು ಸಮಯ ಯಡಿಯೂರಪ್ಪ ಚೆನ್ನಾಗಿ ನಾಯಕತ್ವವನ್ನು ನಿರ್ವಹಿಸಿದ್ದಾರೆ. ಕೋವಿಡ್ ಸಂದರ್ಭವನ್ನು ಕೂಡ ಬಹಳ ಚೆನ್ನಾಗಿ ನಿಭಾಯಿಸಿದ್ದಾರೆ ಎಂದು ಹೇಳಿದರು.

ಪಕ್ಷದ ಆಂತರಿಕ ವಿಚಾರ ನಮಗೆ ಗೊತ್ತಿಲ್ಲ. ‌ಆದರೆ ಈ ಹಂತದಲ್ಲಿ ಬದಲಾವಣೆಯು ಸೂಕ್ತವಲ್ಲ ಅನ್ನೋದು ನಮ್ಮ ವೈಯಕ್ತಿಕ ಅಭಿಪ್ರಾಯ ಎಂದು ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಇವರು ಇಂದು ತಿಳಿಸಿದರು.

ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವು ಅಸ್ತಿತ್ವಕ್ಕೆ ಬಂದು ಜುಲೈ 26ಕ್ಕೆ ಸರಿಯಾಗಿ ಎರಡು ವರ್ಷವಾಗಲಿದೆ. ಅಂದು ಸಂಜೆ ಯಡಿಯೂರಪ್ಪ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳು ಈಗ ಭಾರೀ ಚರ್ಚೆಗೆ ಕಾರಣವಾಗಿವೆ.ನಾಯಕತ್ವ ಬದಲಾವಣೆ ಬಳಿಕ ಮುಂದೆ ಏನು? ಎಂಬ ಪ್ರಶ್ನೆಗೆ ಈಗ ಉತ್ತರವಿಲ್ಲ.ಆದರೆ ಸಿಎಂ ಬದಲಾವಣೆ ಬಗ್ಗೆ ಕರ್ನಾಟಕದಲ್ಲಿ ಇಷ್ಟು ಬೆಳವಣಿಗೆ ನಡೆಯುತ್ತಿದ್ದರೂ ಕೂಡ ಹೈಕಮಾಂಡ್ ನಾಯಕರು ಯಾವುದೇ ರೀತಿಯಾದಂತಹ ಪ್ರತಿಕ್ರಿಯೆಯನ್ನು ನೀಡಿಲ್ಲ.

 

 

 
 
 
 
 
 
 
 
 
 
 

Leave a Reply