ಆಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಹೂಡೆ ವತಿಯಿಂದ ಪ್ರತಿಭಟನೆ

ಹೂಡೆ : ಪೆಟ್ರೋಲ್, ಡಿಸೇಲ್, ಅಡುಗೆ ಸಿಲಿಂಡರ್ ( ಗ್ಯಾಸ್ ) ವಿದ್ಯುತ್ ಬಿಲ್ ಹಾಗೂ ಆಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಹೂಡೆ ವತಿಯಿಂದ ಬುಧವಾರ ಹೂಡೆಯಲ್ಲಿ ಪ್ರತಿಭಟನೆ ನಡೆಸಿದರು.

ಈ ವೇಳೆ ಪ್ರತಿಭಟನಾಕಾರರು ಪೆಟ್ರೋಲ್, ಡಿಸೇಲ್, ವಿದ್ಯುತ್ ಮತ್ತು ಆಗತ್ಯ ವಸ್ತುಗಳ ಬೆಲೆ ಇಳಿಸಿ ಇಲ್ಲವೇ ಖುರ್ಚಿ ಖಾಲಿ ಮಾಡಿ.ಕೊರೊನಾ ಸೋಂಕು ಮತ್ತು ಲಾಕ್ ಡೌನ್ ನಿಂದಾಗಿ ಸಾಮಾನ್ಯ ಜನ ಉದ್ಯೋಗವಿಲ್ಲದೆ, ಉದ್ಯಮಿಗಳು ಉತ್ಪಾದನೆ ಇಲ್ಲದೆ ಕಷ್ಟ-ನಷ್ಟಕ್ಕೀಡಾಗಿದ್ದಾರೆ ಪೆಟ್ರೋಲ್ ಬೆಲೆ 100 ರೂಗಳನ್ನು ದಾಟಿದೆ. ಕಳೆದ ಒಂದೂವರೆ ವರ್ಷದಿಂದ ಈಚೆಗೆ ಸುಮಾರು ಒಂದು ಲೀಡರ್ ಗೆ 30 ರೂಗಳಷ್ಟು ಬೆಲೆ ಜಾಸ್ತಿ ಆಗಿದೆ. 2014 ರಲ್ಲಿ 400 ರೂಗಳಿದ್ದ ಅಡುಗೆ ಅನಿಲದ ಸಿಲಿಂಡರ್ ಬೆಲೆ ಈಗ 850 ರೂ ಆಗಿದೆ. ಈ ಕಾಲದಲ್ಲಿ ನೆರವಿಗೆ ಬರಬೇಕಾಗಿದ್ದ ರಾಜ್ಯದ ಬಿಜೆಪಿ ಸರ್ಕಾರ ನಿರ್ದಯವಾಗಿ ವಿದ್ಯುತ್ ಶುಲ್ಕ ಹೆಚ್ಚಿಸಿ ಹಸಿಗಾಯದ ಮೇಲೆ ಬರೆ ಎಳೆದಿದೆ ಇದು ಜನದ್ರೋಹಿ ಕೆಲಸ ಎಂದು ಆಗ್ರಹಿಸಿದರು.

ವಿದ್ಯುತ್ ದರ ಹೆಚ್ಚಳಕ್ಕೆ ರಾಜ್ಯ ಸರ್ಕಾರ ನೀಡಿರುವ ಕಾರಣಗಳು ಜನರನ್ನು ತಪ್ಪುದಾರಿಗೆಳೆಯುವಂತಿದೆ. ರಾಜ್ಯದ ವಿದ್ಯುತ್ ಸರಬರಾಜು ಕಂಪೆನಿಗಳು ಇಂದು ನಷ್ಟದಲ್ಲಿದ್ದರೆ ಅದಕ್ಕೆ ರಾಜ್ಯ ಸರ್ಕಾರದ ಅದಕ್ಷತೆ, ಭ್ರಷ್ಟಾಚಾರ ಮತ್ತು ಕಾರ್ಪೋರೇಟ್ ಕಂಪೆನಿಗಳ ಓಲೈಕೆ ಕಾರಣ ಸಮರ್ಥನೀಯವಲ್ಲದ, ಅವೈಜ್ಞಾನಿಕ ಮತ್ತು ಜನವಿರೋಧಿಯಾಗಿರುವ ವಿದ್ಯುತ್ ದರ ಹೆಚ್ಚಳವನ್ನು ರಾಜ್ಯ ಸರ್ಕಾರ ತಕ್ಷಣ ಹಿಂದಕ್ಕೆ ಪಡೆಯದಿದ್ದರೆ ರಾಷ್ಟ್ರವ್ಯಾಪಿ ಹೋರಾಟ ತೀವ್ರ ಸ್ವರೂಪ ನಡೆಸಲಿದೆ ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದರು.

ಅಂತರಾಷ್ಟ್ರೀಯ ಮಟ್ಟದಲ್ಲಿ ತೈಲದ ದರ ಬ್ಯಾರೆಲ್ ಗೆ ಕಡಿಮೆ ಇದ್ದರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿತ್ಯ ನಿರಂತರವಾಗಿ ಬೆಲೆ ಏರಿಕೆಯನ್ನು ಮಾಡುತ್ತಾ ಜನತೆಯ ಬದುಕನ್ನು ಬೀದಿಗೆ ತಂದಿವೆ. ಖರೀದಿಸುಬ ಶಕ್ತಿ ಜನತೆಯ ಬಳಿ ಇತ್ತ ಕಡೆ ಕೋವಿಡ್ ಸಂಕಷ್ಟ, ಲಾಕ್ ಡೌನ್ ಇದರ ನಡುವೆ ರಾತ್ರೋರಾತ್ರಿ ಬೆಲೆ ಏರಿಕೆ ಆಗುತ್ತವೆ. ಯುಪಿಎ ಸರ್ಕಾರ ಇರುವಾಗ ಒಂದು ರೂಪಾಯಿ ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚಳ ಆದಾಗ ಬೀದಿಗೆ ಇಳಿದು ಹೋರಾಟ ಮಾಡಿದ ಭಾಜಪ ಹಾಗೂ ಅದರ ನಾಯಕರಾದ ಈಗಿನ ಪ್ರಧಾನಿ ನರೇಂದ್ರ ಮೋದಿ, ಸ್ಮ್ರುತಿ ಇರಾನಿ, ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಮಾಳವೀಕಾ ಅವಿನಾಶ್ ಸೇರಿ ಅನೇಕರು ಈಗ ತುಟಿ ಬಿಚ್ಚದೆ ಕಾರ್ಪೊರೇಟ್ ಸಂಸ್ಥೆಗಳ ಪರ ನಿಂತಿದ್ದಾರೆ. ಆಚೇ ದಿನ ಹೇಳಿದ ಇವರು ಕಟ್ಟಿನ ಕೊಚ್ಚೆ ದಿನಗಳನ್ನು ನೀಡುತ್ತಿದ್ದಾರೆ. ಇವರುಗಳನ್ನು ಮನೆಗೆ ಕಳುಹಿಸದೆ ಈ ದೇಶಕ್ಕೆ ಭವಿಷ್ಯ ಇಲ್ಲ ಎಂದರು.ಸಭೆಯನ್ನುದ್ದೇಶಿಸಿ ಅಸ್ಲಮ್ ಹೈಕಾಡಿ, ಅಬ್ದುಲ್ ಕಾದೀರ್ ಮೊಯ್ದಿನ್ ಮಾತನಾಡಿದರು.

ಡಬ್ಲ್ಯೂಪಿಐ ಉಡುಪಿ ಜಿಲ್ಲಾ ಉಪಾಧ್ಯಕ್ಷ ವಿಜಯ್, ಗ್ರಾ.ಪಂ ಸದಸ್ಯರಾದ ಮಮ್ತಾಝ್, ರವೂಫ್ ಕಿದೆವರ್, ಅಬ್ದುಲ್ ರಝಾಕ್ ನಕ್ವಾ, ಅಲ್ತಾಫ್ ನಕ್ವಾ, ಝೈನುಲ್ಲಾ ಹೂಡೆ, ಶುಐಬ್, ನಿಫಾಲ್ ಹೂಡೆ, ಫೈಸಲ್ ನಕ್ವಾ ಹೂಡೆ, ಅನ್ವರ್ ಸಾಹೇಬ್ ಹೂಡೆ, ಉಮರ್ ಉಸ್ತಾದ್ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply