ಭಾರತೀಯ ನಾರಿ ಜಗತ್ತಿಗೆ ಆದರ್ಶ : ಸುಗುಣೇಂದ್ರ ತೀರ್ಥ ಸ್ವಾಮೀಜಿ

ಸಮಾಜದಲ್ಲಿ ಮಹಿಳೆಯರ ಸ್ಥಾನ ಅತ್ಯಂತ ಪೂಜ್ಯವಾಗಿದ್ದು ಶಾಸ್ತ್ರಗಳಲ್ಲಿ ಮಹಿಳೆಯರಿಗೆ ವಿಶೇಷ ಗೌರವವನ್ನು ನೀಡಿಲಾಗಿದೆ. ಭಾರತೀಯ ನಾರಿಯರು ತಮ್ಮ ಆದರ್ಶವನ್ನು ಜಗತ್ತಿಗೆ ಪರಿಚಿಸಿದ್ದು ಅವುಗಳನ್ನು ಮುಂದಿವರಿಸಿಕೊಂಡು ಹೋಗುವ ಕಾರ್ಯವಾಗಬೇಕು ಎಂದು ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದರು.

 ಅವರು ಇಂದು ನಗರದ ರಾಜಾಂಗಣದ  ಶ್ರೀ ಕೃಷ್ಣ ಮಠದ ಆವರಣದಲ್ಲಿ  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ,  ನಗರಸಭೆ , ಜಿಲ್ಲಾ ಹಾಗೂ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ, ಜಿಲ್ಲಾ ಹಾಗೂ ತಾಲೂಕು ಸ್ತಿçà ಶಕ್ತಿ ಒಕ್ಕೂಟ ಹಾಗೂ ಪರ್ಯಾಯ ಶ್ರೀ ಪುತ್ತಿಗೆ ಮಠ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಅಂತರಾಷ್ಟಿçÃಯ ಮಹಿಳಾ ದಿನಾಚರಣೆ 2024 ಅಂಗವಾಗಿ ಮಹಿಳಾ ಕೇಂದ್ರೀಕೃತ  ಶಾಸನಗಳ  ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಕುಟುಂಬದ ಸಾಮರಸ್ಯವನ್ನು ಉಳಿಸುವಲ್ಲಿ ಮಹಿಳೆಯರ ಪಾತ್ರ ಅಪಾರವಾಗಿದ್ದು ಅವರಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ನೋಡಿಕೊಳ್ಳುವುದು ಪುರುಷರ ಜವಾಬ್ದಾರಿಯಾಗಿದೆ ಎಂದರು.

ಇಂದಿಗೂ ಸ್ತ್ರೀಯರ ಮೇಲೆ ದೌರ್ಜನ್ಯಗಳು ನಡೆಯುತ್ತಿದ್ದು ಅವುಗಳನ್ನು ತಡೆಯುವ ಕಾರ್ಯವಾಗಬೇಕು ಎಂದ ಅವರು ಮಹಿಳಾ ಸಮಾಜವು ಜಾಗೃತಿ ಗೊಂಡಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದರು.

 ಅನೇಕ ಕಾರಣಗಳಿಂದ ಮಹಿಳೆಯರಿಂದ ಅವಕಾಶವನ್ನು ಕಸಿಯಲಾಗುತ್ತಿದ್ದೂ, ಅವರ ಬೆಳೆವಣಿಗೆಗೆ ಅವಕಾಶವನ್ನು ಒದಗಿಸುದರೊಂದಿಗೆ ಪ್ರೋತ್ಸಾಹವನ್ನು ನೀಡಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಮಹಿಳೆಯರು ಬೇರೆ ಬೇರೆ ಕ್ಷೇತ್ರದಲ್ಲಿ ಸಾಧನೆ ಮಾಡುವ ಮೂಲಕ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿದ್ದು,ಮಹಿಳೆಯರ ದಿನಾಚರಣೆಯ ಹೊರತಾಗಿಯೂ ಪ್ರತಿ ದಿನವೂ ಮಹಿಳೆಯರಿಗೆ ಸಮಾಜದಲ್ಲಿ ಗೌರವ ಸಿಗುವಂತಗಾಬೇಕು ಎಂದರು.

ಹೆಣ್ಣು ಬದುಕು ಹಾಗೂ ಆಸ್ತಿತ್ವಕ್ಕಾಗಿ ಹೋರಾಟ ಮಾಡಿಕೊಂಡೆ ಬಂದಿದ್ದು ಇಂದಿಗೂ ದೌರ್ಜನ್ಯ ಹಾಗೂ ಹಿಂಸೆಗೆ ಒಳಗಾಗುವುದು ಕಂಡುಬರುತ್ತಿದೆ ಅವರಿಗೆ ಮುಂದಿನ ದಿನಗಳಲ್ಲಿ ಶಿಕ್ಷಣ ಹಾಗೂ ಆರ್ಥಿಕ ಸ್ವತಂತ್ರ ನೀಡುವುದರೊಂದಿಗೆ ಉತ್ತಮ ಬದುಕು ರೂಪಿಸಿಕೊಳ್ಳುವಂತೆ ಆಗಬೇಕು ಎಂದರು.

ಕಾರ್ಯಕ್ರಮದಲ್ಲಿ ಮಾತನಾಡಿದ   ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ,  ಸರ್ಕಾರ ಮಹಿಳೆಯರ ಹಿತ ರಕ್ಷಣೆಗಾಗಿ ಅನೇಕ ಕಾನೂನು ಗಳನ್ನು ಜಾರಿಗೆ ತಂದಿದೆ ತಮಗೆ ತೊಂದರೆಗೆ ಆದಾಗ ಅವುಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದರು.

 ಕಾರ್ಯಕ್ರಮದಲ್ಲಿ ವೈಕುಂಠ ಬಾಳಿಗ ಕಾನೂನು ವಿದ್ಯಾಲಯದ ನಿರ್ದೇಶಕಿ ನಿರ್ಮಲ ಕುಮಾರಿ, ಮಹಿಳಾ ಸಮಾನತೆ -ಮಹಿಳಾ ಕೇಂದ್ರೀಕೃತ ಶಾಸನಗಳು, ಡೇ ನಲ್ಮ್ ಯೋಜನೆಯ ಅಭಿಯಾನ ವ್ಯವಸ್ಥಾಪಕ ರಾಮಕೃಷ್ಣ, ಮಹಿಳೆಯರ ಸಾಮಾಜಿಕ ಭದ್ರತೆ ಯೋಜನೆಗಳು ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಅನುರಾಧ ಹಾದಿಮನಿ,ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ವೀಣಾ ವಿವೇಕಾನಂದ, ಮಹಿಳಾ ಮಂಡಲದ ಒಕ್ಕೂಟ ಅಧ್ಯಕ್ಷೆ ಸರಳಾ ಕಾಂಚನ್, ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟದ ಅಧ್ಯಕ್ಷೆ ಶೋಭಾ ಕಲ್ಕೂರ್, ಕಾರ್ಯದರ್ಶಿ ಪ್ರೇಮ, ಕುಂದಾಪುರ ತಾಲೂಕು ಮಹಿಳಾ ಮಂಡಲದ ಒಕ್ಕೂಟ ಅಧ್ಯಕ್ಷೆ  ರಾಧಾ ದಾಸ್, ಕಾರ್ಕಳ ತಾಲೂಕು ಮಹಿಳಾ ಮಂಡಲದ ಒಕ್ಕೂಟ ಅಧ್ಯಕ್ಷೆ ಯಶೋಧ ಶೆಟ್ಟಿ, ತಾಲೂಕು ಮಹಿಳಾ ಮಂಡಲದ ಗೌರವಧ್ಯಕ್ಷೆ ಶೀಲಾ ಕೆ. ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲ ಸಿ. ಕೆ ಸ್ವಾಗತಿಸಿ, ಭಾಗೀರಥಿ ಆಚಾರ್ಯ ನಿರೂಪಿಸಿ, ಜಿಲ್ಲಾ ಮಹಿಳಾ ಮಂಡಳಗಳ ಒಕ್ಕೂಟದ ಕಾರ್ಯದರ್ಶಿ ವಸಂತಿ ಕೊರಡ್ಕಲ್ ವಂದಿಸಿದರು.

 
 
 
 
 
 
 
 
 
 
 

Leave a Reply