ಈ ಚುನಾವಣಾ ಬಜೆಟ್ ಅನುಷ್ಟಾನವಾಗಲಿ ~ರಾಘವೇಂದ್ರ ಪ್ರಭು, ಕವಾ೯ಲು

ಮುಖ್ಯಮಂತ್ರಿ ಅವರು ಮಂಡಿಸಿದ ಬಜೆಟ್ ಚುನಾವಣಾ ಸಮಯದಲ್ಲಿ ಆಗಿರುವುದರಿಂದ ಅದರ ಅನುಷ್ಠಾನ ಅಗತ್ಯವಾಗಿ ಆಗಬೇಕು ಸಾಕಷ್ಟು ರೀತಿಯ ಘೋಷಣೆಗಳು ಈ ಸಮಯದಲ್ಲಿ ಬಜೆಟ್ ನಲ್ಲಿ ನೀಡಲಾಗಿದೆ ಮುಖ್ಯವಾಗಿ ರೈತ ಸಿರಿ ಯೋಜನೆ ನರೇಗಾ ಯೋಜನೆಗೆ 1000 ಕೋಟಿ ಮೀಸಲು ಶಾಲೆಗಳಲ್ಲಿ ಮೂಲಭೂತ ಅಭಿವೃದ್ಧಿಗೆ ಯೋಜನೆಗಳು ವಿಶೇಷವಾಗಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿರುವುದು ಉತ್ತಮವಾದ ಬೆಳವಣಿಯಾಗಿದೆ. ರಾಜ್ಯದಲ್ಲಿ 438 ಗ್ರಾಮೀಣ ಹೊಸ ಕ್ಲಿನಿಕ್ ಸ್ಥಾಪನೆಗೆ ಯೋಜನೆ, ವಿವಿಧ ರೀತಿಯ ವಿಶ್ವವಿದ್ಯಾನಿಲಯ ಮತ್ತು ಮೆಡಿಕಲ್ ಕಾಲೇಜ್ ಸ್ಥಾಪನೆಗೆ ಆದ್ಯತೆ ನೀಡಿರುವುದು ಉತ್ತಮವಾದ ವಿಚಾರವಾಗಿದೆ. ನಮ್ಮ ಕರಾವಳಿ ಬಗ್ಗೆ ಚಿಂತನೆ ಮಾಡಿದಾ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಮರೀನಾ ಅಭಿವೃದ್ದಿ.
ಗುರುಪುರ ಮತ್ತು ನೇತ್ರಾವತಿ ನದಿಗಳ ಪಾತ್ರದಲ್ಲಿ ಒಳಸಾರಿಗೆ ಸಂಪರ್ಕ ಕಲ್ಪಿಸಲು ಬಾರ್ಜ್ ಸೇವೆಯನ್ನು ಖಾಸಗಿ ಸಹಭಾಗಿತ್ವದಲ್ಲಿ ಪ್ರಾರಂಭಿಸಲು ಕ್ರಮ’ ಮಂಗಳೂರು- ಹಂಗಾರಕಟ್ಟೆಯಲ್ಲಿ ಸಾರ್ವಜನಿಕ- ಖಾಸಗಿ light cargo transport ಬೋಟ್ ಸೇವೆಗಳ ಪ್ರಾರಂಭ. ಮಂಗಳೂರು- ಕಾರವಾರ- ಗೋವಾ- ಮುಂಬಯಿ ಜಲಸಾರಿಗೆ ಅಭಿವೃದ್ಧಿ.
ಕರಾವಳಿ ವಲಯ ನಿರ್ವಹಣೆ ಯೋಜನೆಯನ್ನು ಜಾರಿಗೊಳಿಸುವ ಮೂಲಕ ಧಾರ್ಮಿಕ, ಸಾಹಸ ಮತ್ತು ಪರಿಸರ ಸ್ನೇಹಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ರೂಪುರೇಷೆ ತಯಾರಿ ಉತ್ತಮ ಅಂಶ.

ಉಡುಪಿ, ದಕ್ಷಿಣ ಮತ್ತು ಉತ್ತರ ಕನ್ನಡದಲ್ಲಿನ ವಸತಿ ಶಾಲೆಗಳ ಅಭಿವೃದ್ಧಿಗೆ ಒತ್ತು,
ಕುಮಟಾದಲ್ಲಿ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ ನಿರ್ಮಾಣ. ಕರಾವಳಿ ಮಲೆನಾಡಿಗೆ ‘ಸಹ್ಯಾದ್ರಿ ಸಿರಿ’ ಯೋಜನೆ ಜಾರಿ, ಆಳ ಸಮುದ್ರ ಮೀನುಗಾರಿಕೆಗೆ ಮತ್ಸ್ಯಸಿರಿ ಯೋಜನೆ ಆರಂಭಿಸಲಾಗಿದ್ದು, ಇದನ್ನು ಕೇಂದ್ರ ಸರ್ಕಾರದ ಮತ್ಸ್ಯ ಸಂಪದ ಯೋಜನೆಯೊಂದಿಗೆ ಸಮನ್ವಯಗೊಳಿಸಿ ಜಾರಿಗೊಳಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಬಜೆಟ್ ನಲ್ಲಿ ತಿಳಿಸಿದ್ದಾರೆ.

ಮೀನುಗಾರಿಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕಾರವಾರದ ಸಮೀಪ ಸೀ ಫುಡ್ ಪಾರ್ಕ್ ಸ್ಥಾಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.ಅಲ್ಲದೇ ಸೀಮೆ ಎಣ್ಣೆ ಆಧಾರಿತ ದೋಣಿಗಳನ್ನು ಪೆಟ್ರೋಲ್ ದೋಣಿಗಳನ್ನಾಗಿ ಮಾರ್ಪಡಿಸಲು 40 ಕೋಟಿ ರೂಪಾಯಿ ಮೀಸಲಿಡಲಾಗುವುದು ಎಂದು ಘೋಷಿಸಿದ್ದು, ಉತ್ತಮ ಅಂಶವಾಗಿದೆ.
ಏನೇ ಆಗಲಿ ಈ ಬಜೆಟ್ ದಾಖಲೆಯಲ್ಲಿರದೆ ಅನುಷ್ಟಾನಕ್ಕೆ ಬರಲಿ ಎಂದು ಎಲ್ಲರ ಆಶಯ.

ರಾಘವೇಂದ್ರ ಪ್ರಭು, ಕವಾ೯ಲು
ಕ .ಸಾ.ಪ ಸಂ.ಕಾಯ೯ದಶಿ೯ ಉಡುಪಿ

 
 
 
 
 
 
 
 
 
 
 

Leave a Reply