ವಾರಾಂತ್ಯದಲ್ಲಿ ಈಗಾಗಲೇ ನಿಗದಿಪಡಿಸಿದ್ದ ಮದುವೆ ಇನ್ನಿತರ ಕಾರ್ಯಕ್ರಮಗಳಿಗೆ ಅವಕಾಶ ನೀಡಬೇಕು – ರಘುಪತಿ ಭಟ್ ಆಗ್ರಹ

ಉಡುಪಿ: ರಾಜ್ಯದಲ್ಲಿ ವಾರಾಂತ್ಯ ಸಂಪೂರ್ಣ ಕರ್ಫ್ಯೂ ಜಾರಿಗೊಳಿಸಿದ ದಿನ ಈಗಾಗಲೇ ನಿಗದಿಪಡಿಸಿದ್ದ ಮದುವೆ ಇನ್ನಿತರ ಕಾರ್ಯಕ್ರಮಗಳಿಗೆ ಜನ ನಿಗದಿಪಡಿಸಿದ ದಿನದಂದೆ ಅವಕಾಶ ಕಲ್ಪಿಸುವಂತೆ ಶಾಸಕ ರಘುಪತಿ ಭಟ್ ಆಗ್ರಹ ವ್ಯಕ್ತಪಡಿಸಿದ್ದಾರೆ.

ಕೋವಿಡ್ – 19 2ನೇ ಅಲೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸರ್ಕಾರ ಹೊಸ ಮಾರ್ಗಸೂಚಿಯನ್ನು ಜಾರಿಗೊಳಿಸಿದೆ. ಈ ಹೊಸ ಮಾರ್ಗಸೂಚಿಯಂತೆ ರಾಜ್ಯದಾದ್ಯಂತ ಶುಕ್ರವಾರ ರಾತ್ರಿ 9:00 ರಿಂದ ಸೋಮವಾರ ಬೆಳಿಗ್ಗೆ 6:00 ವರೆಗೆ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಿರುವ ಕಾರಣ ಈ ನಡುವಿನಲ್ಲಿ ಬರುವ ದಿನಗಳಲ್ಲಿ ಅದರಲ್ಲೂ ಭಾನುವಾರ ಮದುವೆ ಸೇರಿದಂತೆ ಹೆಚ್ಚಿನ ಇನ್ನಿತರ ಕಾರ್ಯಕ್ರಮಗಳು ಈಗಾಗಲೇ ನಿಗದಿಗೊಂಡಿರುತ್ತದೆ. ಈ ಕಾರ್ಯಕ್ರಮಗಳಿಗೆ ಅವಕಾಶ ಕಲ್ಪಿಸುವಂತೆ ಶಾಸಕ ರಘುಪತಿ ಭಟ್ ಅವರು ಜಿಲ್ಲಾಡಳಿತಕ್ಕೆ ಆಗ್ರಹಿಸಿದ್ದಾರೆ.

ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಮದುವೆ ಸೇರಿದಂತೆ ಹಲವಾರು ಧಾರ್ಮಿಕ ಕಾರ್ಯಕ್ರಮಗಳು ನಿಗಧಿಗೊಂಡಿದೆ. ಆದರಿಂದ ಈ ಕಾರ್ಯಕ್ರಮಗಳು ಸ್ಥಗಿತಗೊಂಡರೆ ಜನ ಸಮಸ್ಯೆಗೊಳಗಾಗುತ್ತಾರೆ. ಈ ಹಿನ್ನೆಲೆ ಜಿಲ್ಲಾಡಳಿತವು ಕೋವಿಡ್ – 19 ಮುಂಜಾಗ್ರತಾ ಕ್ರಮಗಳೊಂದಿಗೆ 50 ಜನ ಮೀರದಂತೆ ಜನ ನಿಗದಿಪಡಿಸಿ ಹಾಗೂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರು ಕಡ್ಡಾಯವಾಗಿ ಪಾಸನ್ನು ಪಡೆಯುವಂತೆ ಸೂಚಿಸಿ ಕಾರ್ಯಕ್ರಮಗಳನ್ನು ನಡೆಸಲು ಅವಕಾಶ ಕಲ್ಪಿಸುವಂತೆ ಒತ್ತಾಯ ಮಾಡಿದ್ದಾರೆ.

 
 
 
 
 
 
 
 
 
 
 

Leave a Reply