ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ. 10.00 ಲಕ್ಷ ವೆಚ್ಚದಲ್ಲಿ ಖರೀದಿಸಿದ ಪಲ್ಸ್ ಆಕ್ಸೀ ಮೀಟರ್ ಹಸ್ತಾಂತರ

ಉಡುಪಿ: ಕೊರೋನಾ ಸೋಂಕು ದೃಢಪಟ್ಟು ಯಾವುದೇ ರೋಗ ಲಕ್ಷಣಗಳಿಲ್ಲದೆ ಮನೆಯಲ್ಲಿಯೇ ಐಸೋಲೇಷನ್ ಆದವರಿಗೆ ಪ್ರತಿದಿನ ಆಕ್ಸಿಜನ್ ಸ್ಯಾಚುಲೇಶನ್ ಲೇವೆಲ್ ಪರೀಕ್ಷಿಸಲು ಉಪಯೋಗವಾಗುವಂತೆ ಪಲ್ಸ್ ಆಕ್ಸೀ ಮೀಟರ್ ಆರೋಗ್ಯ ಇಲಾಖೆ ಮುಖಾಂತರ ನೀಡಲು ಶಾಸಕ ಕೆ. ರಘುಪತಿ ಭಟ್ ಸೂಚಿಸಿದ್ದಾರೆ.

ಈ ಹಿನ್ನೆಲೆ ತಕ್ಷಣದಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ. 10.00 ಲಕ್ಷ ಬಿಡುಗಡೆಗೊಳಿಸಿ ಖರೀದಿಸಿದ ಫಲ್ಸ್ ಆಕ್ಸೀಮೀಟರ್ ನ್ನು ಇಂದು ಆರೋಗ್ಯ ಇಲಾಖೆಗೆ ಹಸ್ತಾಂತರಿಸಲಾಯಿತು.

ಕೋವಿಡ್ – 19 ದೃಢಪಟ್ಟು ರೋಗ ಲಕ್ಷಣಗಳಿಲ್ಲದೆ ಮನೆಯಲ್ಲಿ ಐಸೋಲೇಷನ್ ಆದವರ ಮನೆಗೆ ಪ್ರತಿನಿತ್ಯ ಟಾಸ್ಕ್ ಫೋರ್ಸ್ ತಂಡ ಭೇಟಿ ನೀಡಿ ಅವರ ಸ್ಯಾಚುರೇಶನ್ ಲೆವೆಲ್ ಪರೀಕ್ಷೆ ಮಾಡಿ ಆರೋಗ್ಯದ ಬಗ್ಗೆ ಮಾಹಿತಿ ಪಡೆಯಬೇಕು. ವೈದ್ಯಕೀಯ ತಜ್ಞರ ಪ್ರಕಾರ ಸೋಂಕು ದೃಢಪಟ್ಟವರು ತಮ್ಮ ಪಲ್ಸ್ ಸಾಚ್ಯುಲೇಶನ್ ಲೆವೆಲ್ 94 ಕ್ಕಿಂತ ಕಡಿಮೆ ಬಂದ ತಕ್ಷಣದಲ್ಲಿ ಆಸ್ಪತ್ರೆಗೆ ದಾಖಲಾದರೆ ಅವರ ಆರೋಗ್ಯ ತಕ್ಷಣದಲ್ಲಿ ಸುಧಾರಿಸುತ್ತದೆ.ಈ ಕುರಿತು ನಿರ್ಲಕ್ಷ್ಯ ವಹಿಸಿದರೆ ಗಂಭೀರ ಸ್ಥಿತಿಗೆ ತಲುಪುವ ಸಾಧ್ಯತೆ ಹೆಚ್ಚಾಗಿರುತ್ತದೆ. ಆದ್ದರಿಂದ ಸೊಂಕು ದೃಢಪಟ್ಟವರ ಸ್ಯಾಚುಲೇಶನ್ ಲೆವೆಲ್ ದಿನಾ ಪರೀಕ್ಷೆ ಮಾಡಬೇಕು.

ಇದಕ್ಕಾಗಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ರೂ. 10.00 ಲಕ್ಷ ವೆಚ್ಚದಲ್ಲಿ ಪಲ್ಸ್ ಆಕ್ಸೀ ಮೀಟರ್ ಖರೀದಿ ಮಾಡಲಾಗಿದೆ. ಇದನ್ನು ಕೋವಿಡ್ ಸೋಂಕು ದೃಢಪಟ್ಟು ಮನೆಯಲ್ಲಿ ಐಸೋಲೇಶನ್ ಆದವರ ಮನೆಗೆ ಮತ್ತೆ ವಾಪಸ್ ಪಡೆಯುವ ಷರತ್ತು ವಿಧಿಸಿ ನೀಡಿ ಎಂದು ಸೂಚನೆ ನೀಡಲಾಯಿತು.

 
 
 
 
 
 
 
 
 

Leave a Reply