ಕೋರೊನಾ ನಿಯಂತ್ರಣಕ್ಕೆ ಧಾರ್ಮಿಕ ಕಾರ್ಯಕ್ರಮಗಳ ನಿಷೇಧ- ಶಾಸಕ ರಘುಪತಿ ಭಟ್ ವಿರೋಧ

ಉಡುಪಿ: ಕೊರೋನಾ ನಿಯಂತ್ರಣಕ್ಕೆ ನಿಯಮಾವಳಿಗಳನ್ನು ರೂಪಿಸಿ ಬದಲಾಗಿ ಧಾರ್ಮಿಕ ಕಾರ್ಯಕ್ರಮಗಳಿಗೆ ಅಡ್ಡಿ ಪಡಿಸಬೇಡಿ ಎಂದು ಉಡುಪಿ ಶಾಸಕ ರಘುಪತಿ ಭಟ್ ಪುನಃ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಡುಪಿ ಧಾರ್ಮಿಕ ಕೇಂದ್ರಗಳೇ ಹೆಚ್ಚಿರುವ ಜಿಲ್ಲೆಯಾಗಿದ್ದು ಧಾರ್ಮಿಕ ಕಾರ್ಯಕ್ರಮಗಳಿಗೆ ಅಡ್ಡಿಪಡಿಸುವುದು ಬೇಡ ಈ ಮೂಲಕ ಜನರ ಧಾರ್ಮಿಕ ಭಾವನೆಗಳಿಗೆ ಅಡ್ಡಿ ಮಾಡಬೇಡಿ ಎಂದು ಸಿಎಂ -ಆರೋಗ್ಯ ಸಚಿವ- ಮುಖ್ಯ ಕಾರ್ಯದರ್ಶಿಗಳಿಗೆ ಭಟ್ ವಿನಂತಿ ಮಾಡಿದ್ದಾರೆ.

ಕೋಲ,ನೇಮೋತ್ಸವ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳಿಗೆ ಜನ ಕಂಕಣ ಬದ್ಧರಾಗಿದ್ದಾರೆ ಅದಕ್ಕಾಗಿ ಈಗಾಗಲೇ ಮುಹೂರ್ತ ನಿಗದಿಯಾಗಿದೆ ಎಲ್ಲಾ ಸಿದ್ಧತೆಗಳು ನಡೆದಿವೆ. ಧಾರ್ಮಿಕ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಿದರೆ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ ಎಂದಿದ್ದಾರೆ.

ನಾನೊಬ್ಬ ಆಡಳಿತ ಪಕ್ಷದ ಸದಸ್ಯನಾಗಿ ಈ ಮಾತನ್ನು ಹೇಳುತ್ತಿದ್ದೇನೆ ಧಾರ್ಮಿಕ ಕಾರ್ಯಕ್ರಮಗಳಿಗೆ ಅವಕಾಶ ನೀಡದಿರುವುದು ಜನಪ್ರಿಯ ಸರಕಾರದ ಲಕ್ಷಣವಲ್ಲ ಆದ್ದರಿಂದ ಈ ಆದೇಶವನ್ನು ತಕ್ಷಣ ವಾಪಸು ಪಡೆಯಬೇಕು ಎಂದು ಆಗ್ರಹಿಸಿದರು.

ಕೋವಿಡ್ ನಿಯಮಾವಳಿಗಳನ್ನು ರೂಪಿಸಿ ಧಾರ್ಮಿಕ ಕಾರ್ಯಕ್ರಮಗಳಿಗೆ ಅವಕಾಶ ಕೊಡಿ ಅಲ್ಲದೆ ಭಾಗವಹಿಸುವ ಭಕ್ತರ ಸಂಖ್ಯೆಯನ್ನು ನಿಗದಿಪಡಿಸಿ. ಈಗಾಗಲೇ ನಾವು ರಾಜಕೀಯ ಕಾರ್ಯಕ್ರಮಗಳಿಗೆ ಅವಕಾಶ ಕೊಟ್ಟಿದ್ದೇವೆ ಆದರೆ ರಾಜಕೀಯ ಕಾರ್ಯಕ್ರಮಗಳು ಅನಿವಾರ್ಯ ಇಲ್ಲ. ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗೆ ಧಾರ್ಮಿಕ ಕಾರ್ಯಕ್ರಮಗಳು ಅತ್ಯಗತ್ಯ ಆದ್ದರಿಂದ ಜನಸಂದಣಿ ಗೆ ನಿಯಂತ್ರಣ ಹೇರಿ ಧಾರ್ಮಿಕ ಕಾರ್ಯಕ್ರಮಗಳಿಗೆ ಅವಕಾಶ ಕೊಡಿ ಎಂದು ಸರಕಾರಕ್ಕೆ ಒತ್ತಾಯಿಸಿದ್ದಾರೆ.ಹಿಂದುಳಿದ ಜನಾಂಗದವರೇ ಧಾರ್ಮಿಕ ಕಾರ್ಯಕ್ರಮಗಳಲ್ಲಿ ದುಡಿಯುತ್ತಾರೆ ಆದ್ದರಿಂದ ಬಡ ಜನರಿಗೆ ಇದರಿಂದ ಆರ್ಥಿಕ ಹೊಡೆತ ಬೀಳುತ್ತೆ.ಉಡುಪಿ ನಗರಕ್ಕೆ ನೈಟ್ ಕರ್ಪ್ಯೂ ನ ಅಗತ್ಯವೂ ಇಲ್ಲ ಅಲ್ಲದೆ ಕೊರೋನ ನಿಯಂತ್ರಣಕ್ಕೆ ಲಾಕ್ಡೌನ್ ಪರಿಹಾರ ಅಲ್ಲ ಎಂದು ಹೇಳಿದರು.

 
 
 
 
 
 
 
 
 
 
 

Leave a Reply