ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿಸ್ವಾಗತಿಸಿ, ಪ್ರಸ್ತಾವಿಕ ಮಾತುಗಳನ್ನಾಡಿ ರಕ್ಷಾಬಂಧನ ಸ್ವಾಭಿಮಾನದ ಸಂತೇಕವಾಗಿದ್ದು, ಗಿಡಕ್ಕೆ ಬೇಲಿಯ ರಕ್ಷೆ, ನೀರಿಗೆ ಪಾತ್ರೆಯ ರಕ್ಷೆ, ದೇಶದ ಗಡಿಗಳಲ್ಲಿ ಸೈನಿಕರ ರಕ್ಷೆ ಇದ್ದಂತೆ ನಮ್ಮೆಲ್ಲಾ ಸಹೋದ ರಿಯರಿಗೆ ಸಹೋದರದ ಆತ್ಮ ವಿಶ್ವಾಸ ಹಾಗೂ ಮನೋಬಲದ ಶ್ರೀರಕ್ಷೆ ಸದಾ ಇರಲಿ. ಈ ಪವಿತ್ರ ರಕ್ಷಾ ಬಂಧನವು ಹಿಳಾ ಶಕ್ತಿಗೆ ಚೈತನ್ಯ ತುಂಬಲಿ ಎಂದರು.
ಈ ಸಂದರ್ಭದಲ್ಲಿ ಕಾಪು ಶಾಸಕ ಲಾಲಾಜಿ ಮೆಂಡನ್, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಯಶ್ಪಾಲ್ ಎ. ಸುವರ್ಣ, ಗೀತಾಂಜಲಿ ಸುವರ್ಣ, ಶ್ರೀಶ ನಾಯಕ್ ಪೆರ್ಣಂಕಿಲ, ಜಿಲ್ಲಾ ಪ್ರ.ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಸದಾನಂದಉಪ್ಪಿನಕುದ್ರು, ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಮಹಿಳಾ ಮೋರ್ಚಾ ನಗರಾಧ್ಯಕ್ಷೆ ಸರೋಜ ಶೆಟ್ಟಿಗಾರ್, ಜಿಲ್ಲಾ
ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ನಗರಸಭಾ ಸದಸ್ಯ ಪ್ರಭಾಕರ ಪೂಜಾರಿ, ಜಿಲ್ಲಾ ಮಹಿಳಾ ಮೋರ್ಚಾ ಪ್ರ.ಕಾರ್ಯದರ್ಶಿ ರಶ್ಮಿತಾ ಬಿ. ಶೆಟ್ಟಿ, ಜಿಲ್ಲಾ ಯುವ ಮೋರ್ಚಾ ಪ್ರ.ಕಾರ್ಯದರ್ಶಿಗಳಾದ ಅಕ್ಷಿತ್ ಶೆಟ್ಟಿ ಹೆರ್ಗ, ಶರತ್ ಶೆಟ್ಟಿ, ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಸುರೇಂದ್ರ ಪಣಿಯೂರು, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾಅಧ್ಯಕ್ಷ ದಾವೂದ್ ಅಬೂಬಕರ್, ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ಕೇಸರಿ, ರಮಾ ಶೆಟ್ಟಿ, ಸುಮಾ ಶೆಟ್ಟಿ, ಪವಿತ್ರ, ದಯಾಶಿನಿ, ಸುಧಾ ಪೈ ಮುಂತಾದವರು ಉಪಸ್ಥಿತರಿದ್ದರು.