ಉಡುಪಿ ರೇಡಿಯೋ ಟವರ್ ಗೆ ಚಾಲನೆ 

ಅಜ್ಜರಕಾಡು ಭುಜಂಗ ಪಾರ್ಕ್ ನಲ್ಲಿದ ​ಸ್ವಾತಂತ್ರ್ಯ ಪೂರ್ವದ ರೇಡಿಯೋ ಟವರ್ ನ​ ಪ್ರಸಾರ ಕಾರ್ಯಕ್ಕೆ ಶಾಸಕ ರಘುಪತಿಭಟ್ ಗಾಂಧೀ ಜಯಂತಿ​ಯಂದು ಚಾಲನೆ ನೀಡಿದರು.
1938ರಲ್ಲಿ ನಿರ್ಮಾಣಗೊಂಡಿರುವ ಈ ಟವರ್ ಕೆಲವು ವರ್ಷಗಳಿಂದ ಕಾರ್ಯನಿರ್ವಹಣೆ ಸ್ಥಗಿತಗೊಳಿಸಿದ್ದು, ಕಳೆದ ಬಾರಿಯ​ ಗಾಂಧೀ ಜಯಂತಿ ಕಾರ್ಯಕ್ರಮದಂದು ಇದನ್ನು ಗಮನಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್ ಇದನ್ನು ದುರಸ್ತಿಗೊಳಿಸಿ, ಸಾರ್ವಜನಿಕ​ ಬಳಕೆಗೆ ಅನುವು ಮಾಡಲು ಸೂಚಿಸಿದ್ದರು.    
ಪ್ರಸ್ತುತ ದುರಸ್ತಿಗೊಂಡಿರುವ ಈ ಟವರ್ ಮೂಲಕ , ಪಾರ್ಕ್ ಗೆ ಆಗಮಿಸುವ ಸಾರ್ವಜನಿಕರು, ಟವರ್ ನ ಕೆಳಗಡೆ ಇರುವ​ ಕಲ್ಲುಬಂಡೆ ಹಾಗೂ ಸುತ್ತಲಿನ ಪ್ರದೇಶದಲ್ಲಿ ಕುಳಿತು ಪ್ರತಿದಿನ ಸಂಜೆ 5.30 ರಿಂದ 8 ಗಂಟೆಯವರೆಗೆ ರೇಡಿಯೋ​ ಕಾರ್ಯಕ್ರಮಗಳನ್ನು ಆಲಿಸಬಹುದಾಗಿದೆ.ಟವರ್ ನ ಹಳೆಯ ಮೂಲ ಸ್ವರೂಪದಲ್ಲಿ ಏನೂ ಬದಲಾವಣೆ ಮಾಡದೆ, ಹೊಸ​ ಮೈಕ್ ಗಳು ಮತ್ತು ರೇಡಿಯೋ ಅಳವಡಿಸಿದ್ದು, ಕೇಳುಗರಿಗೆ ಹೊಸ ಅನುಭವ ನೀಡಲಿರುವ ಈ ಟವರ್, ಹೆಚ್ಚು ಕರ್ಕ​​ಶವಿಲ್ಲದೇ​ ಪಾರ್ಕ್ ನೊಳಗಿನ ಕೇಳುಗರಿಗೆ ಮಾತ್ರ ಮಾರ್ಧನಿಸಲಿದೆ. ಅಲ್ಲದೇ ಈ ಹಿಂದಿ​ನಂತೆ  ಬೆಳಗ್ಗೆ 8,ಮಧ್ಯಾಹ್ನ 12.30 ಮತ್ತು ರಾತ್ರಿ 8​ 
ಗಂಟೆಗೆ ಒಮ್ಮೆ ಟವರ್ ಮೂಲಕ ಅಲಾರಂ ಮೊಳಗಲಿದೆ.
 
 
 
 
 
 
 
 
 
 
 

Leave a Reply