ಫೆಬ್ರವರಿ 12ರಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ಘಟಕಗಳ ಕಾರ್ಯಕರ್ತರ ಸಭೆ

ಉಡುಪಿ : ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ಘಟಕಗಳ ಕಾರ್ಯಕರ್ತರ ಸಭೆಯೂ ಫೆ.12 ರಂದು ಶನಿವಾರ ಬೆಳಿಗ್ಗೆ ಗಂಟೆ 10.30ಕ್ಕೆ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಜರುಗಲಿದೆ ಎಂದು ಹಿಂದುಳಿದ ಘಟಕಗಳ ಜಿಲ್ಲಾಧ್ಯಕ್ಷ ಸಂಕಪ್ಪ ಎ. ತಿಳಿಸಿದ್ದಾರೆ.

ಮಾಜಿ ಶಾಸಕರು ಮತ್ತು ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ಘಟಕಗಳ ಅಧ್ಯಕ್ಷರಾಗಿರುವ ಲಕ್ಷ್ಮಿನಾರಾಯಣ ಭಾಗವಹಿಸಲಿದ್ದು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಗೋಪಾಲ ಪೂಜಾರಿ, ಪ್ರತಾಪ್ ಚಂದ್ರ ಶೆಟ್ಟಿ ಮತ್ತು ವಿವಿಧ ಹಿಂದುಳಿದ ಘಟಕಗಳ ರಾಜ್ಯ, ಜಿಲ್ಲಾ ಪದಾಧಿಕಾರಿಗಳು ಹಾಗೂ ಜಿಲ್ಲಾ ಕಾಂಗ್ರೆಸ್ ನ ಪ್ರಮುಖ ನಾಯಕರು ಭಾಗವಹಿಸಲಿದ್ದು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಜಿಲ್ಲಾಧ್ಯಕ್ಷರು ತಿಳಿಸಿದ್ದಾರೆ.

Leave a Reply