ಮಲ್ಪೆ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಕುಡಿಯುವ ನೀರಿನ ಘಟಕ ಕೊಡುಗೆ

ಉಡುಪಿ : ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. ಉಡುಪಿ ಇದರ ವತಿಯಿಂದ ಸುಮಾರು ರೂ. 90,000 ವೆಚ್ಚದಲ್ಲಿ ಮಲ್ಪೆ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಕೊಡುಗೆಯಾಗಿ ನೀಡಿದ ಕುಡಿಯುವ ನೀರಿನ ಘಟಕದ ಉದ್ಘಾಟನೆಯನ್ನು ಮಹಾಲಕ್ಷೀ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಯಶ್ ಪಾಲ್ ಸುವರ್ಣ ನೆರವೇರಿಸಿ ಶುಭ ಹಾರೈಸಿದರು.

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಸದಾನಂದ ಸಾಲ್ಯಾನ್, ಪ್ರೌಢಶಾಲೆ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಪಾಂಡುರಂಗ ಮಲ್ಪೆ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಸುರೇಶ್ ಕರ್ಕೇರ, ಗಣ್ಯರಾದ ವಿಜಯ ಬಂಗೇರ, ಸುನೀಲ್ ಶೆಣೈ, ಪ್ರಾಂಶುಪಾಲೆ ವರ್ಗೀಸ್, ಪ್ರೌಢಶಾಲೆ ಹಿರಿಯ ಶಿಕ್ಷಕಿ ಸಂಧ್ಯಾ, ಬ್ಯಾಂಕಿನ ನಿರ್ದೇಶಕ ವೆಂಕಟರಮಣ ಕಿದಿಯೂರು, ಎನ್. ಟಿ. ಅಮೀನ್, ವನಜ ಕುಂದರ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply