ಸಂತ ಸೇವಾಲಾಲ್ ಜಯಂತಿ

ಉಡುಪಿ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ  ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು.

ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸಂತ ಸೇವಾಲಾಲ್‌ರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ ಹಾಗೂ  ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply