ಗಣೇಶೋತ್ಸವ ಆಚರಿಸುವ ಬಗ್ಗೆ ರಾಜ್ಯ ಸರ್ಕಾರದ ಮಾರ್ಗಸೂಚಿ

​ಬೆಂಗಳೂರು: 14, ​ಶ್ರೀ ಗಣೇಶೋತ್ಸವ ಆಚರಿಸುವ ಸಂಬಂಧವಾಗಿ ರಾಜ್ಯ ಸರ್ಕಾರ ಇಂದು ಮಾರ್ಗಸೂಚಿಗಳನ್ನು ಹೊರಡಿಸಿದೆ.

ಪ್ರಮುಖ ಅಂಶಗಳು :
1. ಸರಳ ರೀತಿಯಲ್ಲಿ ಮನೆಯಲ್ಲಿ ಅಥವಾ ದೇವಸ್ಥಾನದೊಳಗೆ ಆಚರಿಸುವುದು.
2. ಸಾರ್ವಜನಿಕ ಸ್ಥಳ (ರಸ್ತೆ, ಗಲ್ಲಿ, ಓಣಿ, ಮೈದಾನ ಇತ್ಯಾದಿ)ಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಬಾರದು.
3. ಸಾರ್ವಜನಿಕ ನದಿ, ಕೊಳ, ಕಲ್ಯಾಣಿ, ಬಾವಿ ಯಲ್ಲಿ ವಿಸರ್ಜನೆ ಮಾಡುವಂತಿಲ್ಲ.
4. ಗಣೇಶನ ಮೂರ್ತಿ ತರುವಾಗ ಅಥವಾ ವಿಸರ್ಜನೆ ಮಾಡುವಾಗ ಮೆರವಣಿಗೆ ಮಾಡಬಾರದು.
5. ಮನೆಯಲ್ಲಿ ಪ್ರತಿಷ್ಠಾಪನೆ ಮಾಡಿದ ಮೂರ್ತಿ ಮನೆಯ ಆವರಣದಲ್ಲಿ ವಿಸರ್ಜನೆ ಮಾಡಬೇಕು.
6. ದೇವಸ್ಥಾನಗಳಲ್ಲಿ ದಿನನಿತ್ಯ ಸ್ಯಾನಿಟೈಸ್ ಮಾಡಬೇಕು, ಸಾಮಾಜಿಕ ಅಂತರ ಕಾಪಾಡ​ ​ಬೇಕು.
7. ಸರ್ಕಾರದ ಮಾರ್ಗ​ ​ಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು.
ಮಾರ್ಗಸೂಚಿಗಳನ್ನು ಉಲ್ಲಂಘಿಸಿದರೆ ವಿಪತ್ತು ನಿರ್ವಹಣಾ ಕಾಯ್ದೆ, 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188 ಅಡಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದು ಸರ್ಕಾರದ ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.

 

 
 
 
 
 
 
 
 
 
 
 

Leave a Reply